
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ಅಂತರ್ ವಿಭಾಗದ ಶಿಕ್ಷಕರ ವರ್ಗಾವಣೆ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ರಾಜಧಾನಿ ಬೆಂಗಳೂರಿಗೆ ಬಂದ ಶಿಕ್ಷಕರಿಗೆ ಶಾಕ್ ಆಗಿದೆ. ವರ್ಗಾವಣೆಯ ಯಾವುದೇ ಪ್ರಕ್ರಿಯೆಗಳು ಆರಂಭವಾಗದಿರುವುದು ಶಿಕ್ಷಕರನ್ನು ದಂಗುಬಡಿಸಿದೆ.
ಶಿಕ್ಷಕರ ಭವನಕ್ಕೆ ಆಗಮಿಸಿದ್ದ ಶಿಕ್ಷಕರಿಗೆ ಯಾವುದೇ ವರ್ಗಾವಣೆ ಪ್ರಕ್ರಿಯೆ ಮಾಡದಿರುವುದನ್ನು ಕಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದಿನಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಹಲವು ಜಿಲ್ಲೆಗಳಿಂದ ಆಗಮಿಸಿದ ಸಿಕ್ಷಕರು ಶಿಕ್ಷಣ ಇಲಾಖೆ ನಡೆಗೆ ಕಿಡಿಕಾರಿದ್ದಾರೆ.
ಈ ವೇಳೆ ಮಾತನಾಡಿದ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಪವಾಡೆಪ್ಪ. ಕೂಡಲೇ ಸಮಸ್ಯೆಯನ್ನು ಬಗೆಹರಿಸಿ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಆಂಬುಲೆನ್ಸ್ ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ