Latest

*ಡ್ಯಾನ್ಸ್ ಗೆ ಹೆಜ್ಜೆ ಹಾಕುತ್ತಾ ಕುಸಿದು ಬಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಏಕಾಏಕಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇಲ್ಲೋರ್ವ ಶಿಕ್ಷಕ ಕಾರ್ಯಕ್ರಮವೊಂದರಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಜಸ್ಥಾನದ ಜೈಪುರದಲ್ಲಿ ಈ ದುರಂತ ಸಂಭವಿಸಿದೆ. ಸಮಾರಂಭವೊಂದರಲ್ಲಿ ಶಿಕ್ಷಕ ತೃತೀಯಲಿಂಗಿ ಜೊತೆ ನೃತ್ಯಕ್ಕೆ ಹೆಜ್ಜೆ ಹಾಕುತ್ತಿದ್ದ ಶಿಕ್ಷಕ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಮೇಲೇಳಲು ಸಾಧ್ಯವಾಗದೇ ಸ್ಥಳದಲ್ಲೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಮೃತ ಶಿಕ್ಷಕನನ್ನು ಮನ್ನ ರಾಮ್ ಜಖರ್ ಎಂದು ಗುರುತಿಸಲಾಗಿದೆ. ಶಿಕ್ಷಕರ ನಿವೃತಿ ಸಮಾರಂಭವೇರ್ಪಡಿಸಲಾಗಿತ್ತು. ಈ ವೇಳೆ ನೃತ್ಯ ತಂಡಗಳನ್ನು ಕರೆಸಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಶಿಕ್ಷಕ ನೃತ್ಯಪಟು ಜೊತೆ ಸಂತೋಷದಿಂದ ಡಾನ್ಸ್ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button