
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ಹೊರವಲಯದ ರೋಜಿಪುರ ಮತಗಟ್ಟೆ 155ರಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿ ಕವಿತಾ (36) ಅಸ್ವಸ್ಥಗೊಂಡು ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕವಿತಾ ಮೃತಪಟ್ಟಿದ್ದಾರೆ.
ಶಿಕ್ಷಕಿ ಕವಿತಾ ನೆಲಮಂಗಲ ತಾಲೂಕಿನ ಮಾರಗೊಂಡನಹಳ್ಳಿ ನಿವಾಸಿಯಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ