Latest
*ಪಾಠ ಮಾಡುತ್ತಲ್ಲೇ ಕುಸಿದು ಬಿದ್ದ ಶಿಕ್ಷಕ: ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಶಿಕ್ಷಕರೊಬ್ಬರು ಶಾಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರೌಢಶಾಲೆಯಲ್ಲಿ ನಡೆದಿದೆ.
ಚಿತ್ರಕಲಾ ಶಿಕ್ಷಕ ಗಜಾನನ ಹಿರೇಮಠ ಮೃತ ಶಿಕ್ಷಕ. ಎಂದಿನಂತೆ ವಿದ್ಯಾರ್ಥಿಗಳಿಗೆ ವಾಲಿಬಾಲ್ ಆಟದ ಬಗ್ಗೆ ತರಬೇತಿ ನೀಡುತ್ತ ಪಾಠ ಮಾಡುತ್ತಿದ್ದ ಗಜಾನನ ಹಿರೇಮಠ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ಸಾಗರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲೇ ಹೃದಯಾಘಾತದಿಂದ ಶಿಕ್ಷಕ ಕೊನೆಯುಸಿರೆಳೆದಿದ್ದಾರೆ. ಶಿಕ್ಷಕ ಗಜಾನನ ಹಿರೇಮಠ ಪತ್ನಿ ಹಾಗೂ ಮಗನನ್ನು ಅಗಲಿದ್ದಾರೆ.




