ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿಕ್ಷಕಿಯೊಬ್ಬರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಶಾಂತಿನಗರದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು 30 ವರ್ಷದ ಕೌಸರ್ ಮುಬಿನಾ ಎಂದು ಗುರುತಿಸಲಾಗಿದೆ. ಪತಿಯಿಂದ ದೂರವಿದ್ದ ಕೌಸರ್ ಮುಬಿನಾ, ಮಗಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಂದು ಮಧ್ಯಾಹ್ನ ಮಹಿಳೆಯನ್ನು ದುಷ್ಕರ್ಮಿಗಳು ಮನೆಯಲ್ಲಿಯೇ ಚಾಕುವಿನಿಂದ ಇರಿದು ಕೊಂದು ಪರಾರಿಯಾಗಿದ್ದಾನೆ. ಆರೋಪಿಗಳ ಗುರುತು ಪತ್ತೆಯಾಗಿಲ್ಲ.
ಲಾಲ್ ಬಾಗ್ ಬಳಿಯ ಖಾಸಗಿ ಶಾಲೆಯಲ್ಲಿ ಕೌಸರ್ ಶಿಕ್ಷಕಿಯಾಗಿದ್ದರು. ಘಟನೆ ಸಂದರ್ಭದಲ್ಲಿ ಮಗಳು ಶಾಲೆಗೆ ಹೋಗಿದ್ದಳು. ಮನೆಯಲ್ಲಿ ಕಿರುಚಾಟ ಕೇಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಆಗಮಿಸಿದ್ದಾರೆ. ಅಷ್ಟರಲ್ಲಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದು, ಕೌಸರ್ ಮನೆಯ ಬಾಗಿಲಿನಲ್ಲಿ ರಕ್ತದ ಮಡುವಲ್ಲಿ ಬಿದ್ದಿದ್ದರು. ಕುತ್ತಿಗೆ ಭಾಗದಲ್ಲಿ ಮೂರು ಕಡೆ ಇರಿತದ ಗಾಯಗಳಾಗಿವೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೊಲೆ ಆರೋಪಿಗಳಿಗಾಗು ಹುಡುಕಾಟ ನಡೆಸಿದ್ದಾರೆ.
*ಅಪಾರ್ಟ್ ಮೆಂಟ್ ನಿಂದ ಜಿಗಿದು ಯುವಕ ಆತ್ಮಹತ್ಯೆ*
https://pragati.taskdun.com/young-mansuicidejumpapartment/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ