
ಪ್ರಗತಿವಾಹಿನಿ ಸುದ್ದಿ: ದುಷ್ಕರ್ಮಿಗಳು ಅತಿಥಿ ಶಿಕ್ಷಕರೊಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಳ್ಳನಂಜಯ್ಯನಪಾಳ್ಯದಲ್ಲಿ ನಡೆದಿದೆ.
47 ವರ್ಷದ ಮರಿಯಪ್ಪ ಹತ್ಯೆಯಾಗಿರುವ ಶಿಕ್ಷಕ. ಮಚ್ಚಿನಿಂದ ಕೊಚ್ಚಿ ಕೊಲೆಗೈಯ್ಯಲಾಗಿದೆ. ಮರಿಯಪ್ಪ ಮೋದೂರು ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ದುಷ್ಕರ್ಮಿಗಳು ಜಮೀನು ಒಂದರಲ್ಲಿ ಶಿಕ್ಷಕನನ್ನು ಹತ್ಯೆಗೈದು ಬಿಸಾಗಿದ್ದಾರೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ