Latest

ಶಿಕ್ಷಕಿ ಮೇಲೆ ಅತ್ಯಾಚಾರ; ಮತಾಂತರವಾಗಿ ಮದುವೆಯಾಗುವಂತೆ ಒತ್ತಾಯ

ಪ್ರಗತಿವಾಹಿನಿ ಸುದ್ದಿ; ಲಕ್ನೋ: ಶಾಲಾ ಶಿಕ್ಷಕಿ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿರುವ ಯುವಕನೊಬ್ಬ ಮತಾಂತರವಾಗಿ ತನ್ನನ್ನೇ ಮದುವೆಯಾಗುವಂತೆ ಒತ್ತಾಯಿಸಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿದೆ.

28 ವರ್ಷದ ಶಿಕ್ಷಕಿ ಮೇಲೆ ಅಟ್ಟಹಾಸ ಮೆರೆದಿರುವ ಯುವಕ ಇದೀಗ ತನ್ನನ್ನೇ ಮದುವೆಯಾಗುವಂತೆ ಶಿಕ್ಷಕಿಗೆ ಬೆದರಿಕೆಯೊಡ್ಡುತ್ತಿದ್ದಾನೆ. ಇದೀಗ ಆರೋಪಿ ಆಮೀರ್ ಹಾಗೂ ಆತನ ಕುಟುಂಬದ ವಿರುದ್ಧ ಪ್ರಕರಣ ದಾಖಲಾಗಿದೆ.

Home add -Advt

ಮೇ 4ರಂದು ಶಿಕ್ಷಕಿ ಶಾಲೆ ಮುಗಿಸಿಕೊಂಡು ಮನೆಗೆ ತೆರೆಳುತ್ತಿದ್ದಾಗ ಅದೇ ಗ್ರಾಮದ ಯುವಕ ಆಮೀರ್ ಮನೆಗೆ ಡ್ರಾಪ್ ಕೊಡುವುದಾಗಿ ಹೇಳಿ ಕರೆದೊಯ್ದಿದ್ದಾನೆ. ಬಳಿಕ ಮೂಗಿಗೆ ಮತ್ತಿನ ಔಷಧಿ ಸ್ಪ್ರೇ ಮಾಡಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರವೆಸಗಿದ್ದಾನೆ.

ಇದೀಗ ಆಮೀರ್ ಹಾಗೂ ಆತನ ಕುಟುಂಬ ಸದಸ್ಯರು ಆಮೀರ್ ನನ್ನೇ ವಿವಾಹವಾಗಿ ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಹಿನ್ನೆಲೆಯಲ್ಲಿ ಆರೋಪಿ ಆಮೀರ್, ಆತನ ತಾಯಿ, ಸಹೋದರಿ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ತಿಳಿಸಿದ್ದಾರೆ.

ಬೆಳಗಾವಿ: ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಪ್ರಕರಣ; 15 ಎಂಬಿಬಿಎಸ್ ವಿದ್ಯಾರ್ಥಿಗಳ ವಿರುದ್ಧ FIR; ಕಾಲೇಜಿನಿಂದ ವಿದ್ಯಾರ್ಥಿಗಳ ಸಸ್ಪೆಂಡ್

Related Articles

Back to top button