
ಪ್ರಗತಿವಾಹಿನಿ ಸುದ್ದಿ: ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಯ ಮನೆಗೆ ನುಗ್ಗಿ ಅತ್ಯಾಚಾರವೆಸಗಿರುವ ಆರೋಪ ಕಲಬುರಗಿ ಜಿಲ್ಲೆಯಲ್ಲಿ ಕೇಳಿಬಂದಿದೆ.
ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಿವರಾಜ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಆರೋಪಿ. 14 ವರ್ಷದ ವಿದ್ಯಾರ್ಥಿನಿ ಮೇಲೆ ಆತ್ಯಾಚಾರವೆಸಗಿದ್ದಾನೆ.
ಮಾದನಹಿಪ್ಪರಗಾ ಗ್ರಾಮದ ಶಾಲೆಯಲ್ಲಿ ಶಿವರಾಜ್ ಅತಿಥಿ ಶಿಕ್ಷಕನಾಗಿದ್ದ. ಅದೇ ಶಾಲೆಯ ವಿದ್ಯಾರ್ಥಿನಿಯ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಶಿಕ್ಷಕ ಈ ಕೃತ್ಯವೆಸಗಿದ್ದಾನೆ.
ಪ್ರಕರಣ ಸಂಬಂಧ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಮಾದನಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.