ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಅದೇಶ ಹೊರಡಿಸಿದೆ.
ಇತ್ತೀಚೆಗೆ ಪ್ರಕಟವಾಗಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಶ್ನಿಸಿ ಹಲವು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಪತಿಯ ಜಾತಿ, ಆದಾಯ ಪ್ರಮಾಣ ಪತ್ರ, ತಂದೆಯ ಜಾತಿ, ಆದಾಯ ಪ್ರಮಾಣ ಪತ್ರ ಪರಿಗಣನೆ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
ಶಿಕ್ಷಣ ಇಲಾಖೆಯ ನಿಯಮ ಕಾನೂನುಬಾಹಿರ ಎಂದು ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದರು. ಅಂತಿಮವಾಗಿ ಹೈಕೋರ್ಟ್ ಏಕಸದಸ್ಯಪೀಠದ ನ್ಯಾ. ಎಂ.ನಾಗಪ್ರಸನ್ನ, ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿದ್ದಾರೆ. ಅಲ್ಲದೇ ಹೊಸದಾಗಿ ಆಯ್ಕೆಪಟ್ಟಿ ಪ್ರಕಟಿಸುವಂತೆ ಶಿಕ್ಷಣ ಇಲಾಖೆಗೆ ಆದೇಶ ನೀಡಿದ್ದಾರೆ.
*ರವೀಂದ್ರ ಗಡಾದಿ ಸೇರಿ 13 IPS ಅಧಿಕಾರಿಗಳ ದಿಢೀರ್ ವರ್ಗಾವಣೆ*
https://pragati.taskdun.com/13-ips-officerstransferstat-govt/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ