ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಆ.15ರೊಳಗೆ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ ಕುಮಾರ ಪ್ರಕಟಿಸಿದ್ದಾರೆ.
ಕೊರೋನಾ ಹಾವಳಿ ಮಧ್ಯೆ ಈ ವರ್ಷ ಶಿಕ್ಷಕರ ವರ್ಗಾವಣೆ ನಡೆಯಲಿಕ್ಕಿಲ್ಲ ಎನ್ನುವ ಊಹೆ ಇತ್ತು. ಆದರೆ ಈಗಾಗಲೆ ಶಿಕ್ಷಕರ ವರ್ಗಾವಣೆ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿ ನಡೆಸಲಾಗಿದ್ದು, ಇನ್ನು 2 ವಾರದಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಕಳೆದ 3-4 ವರ್ಷದಿಂದ ವಿವಿಧ ಗೊಂದಲಗಳಿಂದಾಗಿ ಶಿಕ್ಷಕರ ವರ್ಗಾವಣೆ ಸಮರ್ಪಕವಾಗಿ ನಡೆದಿರಲಿಲ್ಲ. ಹಾಗಾಗಿ ಶಿಕ್ಷಕರು ತೀವ್ರ ಅಸಮಾಧಾನಗೊಂಡಿದ್ದರು. ಈ ಬಾರಿ ಯಾವುದೇ ಗೊಂದಲಗಳು ನಡೆಯದೆ ಸರಾಗವಾಗಿ ವರ್ಗಾವಣೆ ಪ್ರಕ್ರಿಯೆ ನಡೆಯಲಿ ಎನ್ನುವುದು ಶಿಕ್ಷಕರ ಆಶಯ.
ಕೇಂದ್ರದ ನೂತನ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ಜಾರಿಗೊಳಿಸಲಾಗುವುದು ಎಂದು ತಿಳಿಸಿರುವ ಸುರೇಶ ಕುಮಾರ ಇನ್ನೊಂದು ವಾರದಲ್ಲೇ ನೀತಿ ಜಾರಿಯಾಗಲಿದೆ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ