
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಲವು ವರ್ಷಗಳಿಂದ ಕಾಯುತ್ತಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಜೂನ್ 30ರಂದು ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಅಂದಿನಿಂದಲೇ ವರ್ಗಾವಣೆ ಆರಂಭವಾಗಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಜೂನ್ 30, ಬುಧವಾರದಿಂದ ಆರಂಭಗೊಳ್ಳಲಿದೆ ಎಂದರು.
ಈ ಹಿಂದೆ ಕಡ್ಡಾಯ ವರ್ಗಾವಣೆಯಲ್ಲಿ ತೊಂದರೆಗೊಳಗಾದವರಿಗೆ ಈ ಬಾರಿ ಮೊದಲ ಆದ್ಯತೆ ನೀಡಲಾಗುತ್ತಿದೆ. ಶಿಕ್ಷಕ ಸ್ನೇಹಿ ವರ್ಗಾವಣೆ ನೀತಿ ಜಾರಿಗೊಳಿಸಲಾಗಿದೆ. ಈ ಬಾರಿ ವಿಶೇಷವಾಗಿ ಶಿಕ್ಷಕರ ಕೌನ್ಸೆಲಿಂಗ್ ಆನ್ ಲೈನ್ ನಲ್ಲಿ ನಡೆಯಲಿದ್ದು, ಯಾವುದೇ ಕೇಂದ್ರಗಳಿಗೆ ಶಿಕ್ಷಕರು ಹೋಗಬೇಕಿಲ್ಲ. ಶಿಕ್ಷಕ ಮಿತ್ರ ಆಪ್ ಮೂಲಕವಾಗಿ ಮನೆಯಿಂದಲೇ ಶಿಕ್ಷಕರು ಕೌನ್ಸೆಲಿಂಗ್ ನಲ್ಲಿ ಭಾಗಿಯಾಗಬಹುದು ಎಂದರು.
ಈಗಾಗಲೇ 75,000ಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆಗಾಗಿ ಈಗಾಗಲೆ ಅರ್ಜಿ ಸಲ್ಲಿಸಿದ್ದು, ಇನ್ನೂ ಹೆಚ್ಚಿನವರಿಗೂ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದರು.
SSLC ಪರೀಕ್ಷೆಗೆ ಮುಹೂರ್ತ್ ಫಿಕ್ಸ್
ಕಡ್ಡಾಯ ವರ್ಗಾವಣೆಗೊಂಡ ಶಿಕ್ಷಕರ ಪರ ಅಧಿಸೂಚನೆ ಪ್ರಕಟ; ಆಕ್ಷೇಪಣೆಗೆ 7 ದಿನ ಅವಕಾಶ