ಪ್ರಗತಿವಾಹಿನಿ ಸುದ್ದಿ; ತುಮಕೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ತುಮಕೂರು ಜಿಲ್ಲೆ ಮದುಗಿರಿತಾಲೂಕಿನ ಬೋರನಕುಂಟೆ ಸರ್ಕಾರಿ ಶಾಲಾ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ.
ಮಂಜುನಾಥ್ ಅಮಾನತುಗೊಂಡಿರುವ ಶಿಕ್ಷಕ. ಇದೇ ವೇಳೆ ಕರ್ತವ್ಯಲೋಪ ಆರೋಪ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕ ನಟರಾಜ್ ಅವರನ್ನೂ ಸಸ್ಪೆಂಡ್ ಮಾಡಲಾಗಿದೆ.
ಶಿಕ್ಷಕ ಮಂಜುನಾಥ್ ಪ್ರತಿದಿನ ವಿದ್ಯಾರ್ಹಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿಗಳು ಪೋಷಕರ ಬಳಿ ಅಳಲು ತೋಡಿಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಶಿಕ್ಷಕನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪೊಲೀಸರು ವಿದ್ಯಾರ್ಥಿಗಳನ್ನು ವಿಚಾರಿಸಿ ಬಳಿಕ ಶಿಕ್ಷಕರಿಬ್ಬರನ್ನೂ ಅಮಾನತುಗೊಳಿಸಿದ್ದಾರೆ.
ಶಿಕ್ಷಕ ಮಂಜುನಾಥ್ ನನ್ನು ಬಡವನಹಳ್ಲಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ