Karnataka News
*ಶಿಕ್ಷಕನಿಂದಲೇ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ*

ಆರೋಪಿ ಅರೆಸ್ಟ್
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ, ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿವೆ. ಇಲ್ಲೋರ್ವ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ್ಷ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದೆ.
ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಮಲ್ಲಿಕಾರ್ಜುನ ಕುಮಸಿ, ಶಾಲೆಯ ಅವಧಿ ಮುಗಿದ ಬಳಿಕ 5ನೇ ತರಗತಿ ವಿದ್ಯಾರ್ಥಿನಿಯನ್ನು ಕರೆಸಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಕಾಮುಕ ಶಿಕ್ಷನ ವಿರುದ್ಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿಯನ್ನು ಬಂಧಿಸಿದ್ದಾರೆ.



