Kannada NewsKarnataka NewsLatest

*ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಶಿಕ್ಷಕಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ನವವಿವಾಹಿತೆಯರು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಗಳು ಹೆಚ್ಚುತ್ತಿವೆ. ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

Home add -Advt

ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಈ ಘಟನೆ ನಡೆದಿದೆ. ಶ್ವೇತಾ (25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕಿ. ಸಾವಿಗೂ ಮುನ್ನ ಶ್ವೇತಾ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ.

ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಗಂಡ ಹಾಗೂ ಆತನ ಅಕ್ಕ ಕಾರಣ. ಅವರಿಂದ ನನಗೆ ಹಿಂಸೆಯಾಗುತಿದೆ. ಇನ್ಮುಂದೆ ಬದುಕುವ ಆಸೆಯೇ ಇಲ್ಲ. ಆ ರೀತಿ ನನಗೆ ಹಿಂಸೆ ನೀಡಿದ್ದಾರೆ. ನಾನು ಸಾವನ್ನಪ್ಪಿದರೆ ಅವರನ್ನು ಮಾತ್ರ ಶಿಕ್ಷಿಸದೇ ಬಿಡಬೇಡಿ ಎಂದು ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇತಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗಳನ್ನು ಕಳೆದುಕೊಂಡಿರುವ ತಂದೆ-ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

Related Articles

Back to top button