Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಹಲವೆಡೆ ಬಿಸಿಲ ಝಳ ಆರ‍ಂಭವಾಗಿದೆ. ಕೆಲವೆಡೆ ಮಾತ್ರ ಮಳೆಯಾಗುತ್ತಿದೆ. ಈ ನಡಿವೆ ಇಂದು ಹಾಗೂ ನಾಳೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಹಾಗೂ ಸೆಪ್ಟೆಂಬರ್ 12ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 11ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

Home add -Advt

ಉತ್ತರ ಒಳನಾಡಿನಲ್ಲಿ ಬೀದರ್, ಕಲಬುರಗಿ, ಗದಗ, ಕೊಪ್ಪಳ, ಧಾರವಾಡ ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆ ಸೆಪ್ಟೆಂಬರ್ 12ರಂದು ಕೂಡ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗಬಹುದು.

ದಕ್ಷಿಣ ಒಳನಾಡಿನಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Related Articles

Back to top button