Latest

ಶಿಕ್ಷಕರಿಗೆ ವರ್ಕ್ ಫ್ರಂ ಹೋಂ ಕೆಲಸ ನೀಡಿದ ಶಿಕ್ಷಣ ಇಲಾಖೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಾಮಾರಿ ಕೊರೊನಾ ಹೆಚ್ಚಳ ಹಾಗೂ ಲಾಕ್‍ಡೌನ್ ಹಿನ್ನೆಲೆಯಲ್ಲಿ ಶಿಕ್ಷಕರು ಮನೆಯಿಂದಲೇ ಕೆಲಸ ಮಾಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸದ್ಯಕ್ಕೆ ಜುಲೈ 31 ವರೆಗೆ ಮನೆಯಿಂದಲೇ ಕೆಲಸ ನಿರ್ವಹಿಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಅಧಿಕೃತವಾಗಿ ಆದೇಶ ಹೊರಡಿಸಿದೆ. ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಮಾಡುತ್ತಿರುವ ಶಿಕ್ಷಕರನ್ನು ಹೊರತುಪಡಿಸಿ ಉಳಿದವರು ಮನೆಯಿಂದಲೇ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ.

ಶಿಕ್ಷಣ ಇಲಾಖೆ ಕೆಲಸ ನಿಯಮ ವಿಧಿಸಿ ವರ್ಕ್ ಫ್ರಮ್ ಹೋಂಗೆ ಅವಕಾಶ ಮಾಡಿಕೊಟ್ಟಿದೆ. ಯಾವುದೇ ಮಾಹಿತಿ ನೀಡದೆ ಶಿಕ್ಷಕರು ಕೇಂದ್ರ ಸ್ಥಾನವನ್ನು ಬಿಡುವಂತೆ ಇಲ್ಲ. ಜೊತೆಗೆ ಶಿಕ್ಷಕರನ್ನ ಸಂಪರ್ಕಕ್ಕೆ ಪಡೆಯಲು ದೂರವಾಣಿ ಸಂಖ್ಯೆ, ಇಮೇಲ್ ಐಡಿಯನ್ನು ಶಿಕ್ಷಣ ಇಲಾಖೆ ನೀಡುವುದು. ಅಷ್ಟೇ ಅಲ್ಲದೇ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಶಿಕ್ಷಕರು ಆರೋಗ್ಯ ಸೇತು ಆಪ್ ಅನ್ನು ಕಡ್ಡಾಯವಾಗಿ ಬಳಸಬೇಕಾಗುತ್ತದೆ. ಆನ್‍ಲೈನ್ ತರಗತಿ ನಡೆಸುವ ಶಿಕ್ಷಕರು ಮನೆಯಿಂದಲೇ ತರಗತಿಯನ್ನು ನಡೆಸಬೇಕು. ಇದಲ್ಲದೇ ಶಿಕ್ಷಣ ಇಲಾಖೆಯ ಶೈಕ್ಷಣಿಕ ಕಾರ್ಯಚಟುವಟಿಕೆಗಳ ಬಗ್ಗೆ ಶಿಕ್ಷಕರು ಅಗತ್ಯ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button