ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾಫ್ಟ್ ವೇರ್ ಎಂಜಿನಿಯರ್ ಓರ್ವರು ಕಾರಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ.
ವಿಜಯ್ ಕುಮಾರ್ (51) ಮೃತ ಸಾಫ್ಟ್ ವೇರ್ ಎಂಜಿನಿಯರ್. ವಿಜಯ್ ಕುಮಾರ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆಯುತ್ತಿದ್ದರೂ ಖಿನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಹಲವು ಬಾರಿ ವಿಜಯ್ ಕುಮಾರ್ ಪತ್ನಿ ಜೊತೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರಸ್ತಾಪಿಸಿದ್ದರು ಎನ್ನಲಾಗಿದೆ.
ಕಾರು ವಾಷ್ ಗೆ ಕೊಡುವುದಾಗಿ ಹೇಳಿ ಮನೆಯಿಂದ ಹೊರಟ ವಿಜಯ್ ಕುಮಾರ್ ಕುರುಬರಹಳ್ಳಿ ಜಂಕ್ಷನ್ ಬಳಿ ರಸ್ತೆ ಪಕ್ಕದಲ್ಲಿ ಕಾರು ನಿಲ್ಲಿಸಿ ನೈಟ್ರೋಜನ್ ಆನ್ ಮಾಡಿ ಕಾರಿನೊಳಗೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಆಗಮಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
*ಬೆಸ್ಕಾಂ ಉದ್ಯೋಗದಲ್ಲಿ ಗೋಲ್ ಮಾಲ್; ಎಂಜಿನಿಯರ್ ಸೇರಿ 6 ಆರೋಪಿಗಳ ಬಂಧನ*
https://pragati.taskdun.com/bescom-scamchitradurga6-officers-arrrested/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ