Latest

ಡೆತ್ ನೋಟ್ ಬರೆದಿಟ್ಟು ಮಹಿಳಾ ಟೆಕ್ಕಿ ಆತ್ಮಹತ್ಯೆಗೆ ಶರಣು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಅಮೃತಹಳ್ಳಿಯ ವೀರಣ್ಣಪಾಳ್ಯದಲ್ಲಿ ಸಂಗೀತಾ (26) ಎಂಬ ಮಹಿಳಾ ಟೆಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿಯ ಕಿರುಕುಳ, ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

Home add -Advt

ಸಂಗೀತಾ ಹಾಗೂ ಆಕೆಯ ಪತಿ ವಿನಯ್ ಇಬ್ಬರೂ ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಗಳಾಗಿ ಕೆಲಸಮಾಡುತ್ತಿದ್ದರು. 4 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಬರಬರುತ್ತಾ ಪತಿಯ ಕಿರುಕುಳಕ್ಕೆ ಸಂಗೀತಾ ಮನನೊಂದಿದ್ದರು ಎನ್ನಲಾಗಿದೆ. ಇದೀಗ ಡೆತ್ ನೋಟ್ ಪರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಅಮೃತಹಳ್ಳಿ ಠಾಣಾ ಪೊಲೀಸರು ಆರೋಪಿ ಪತಿ ವಿನಯ್ ನನ್ನು ವಶಕ್ಕೆ ಪಡೆದಿದ್ದಾರೆ.
ಬಿಪಿನ್ ರಾವತ್ ಸಾವು ಸಂಭ್ರಮಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

Related Articles

Back to top button