Kannada NewsKarnataka NewsLatest

*ಟ್ರೆಕಿಂಗ್ ಗೆ ಹೋಗಿ ನಾಪತ್ತೆಯಾಗಿದ್ದ ಟೆಕ್ಕಿ ಕಲ್ಲು ಕ್ವಾರಿಯಲ್ಲಿ ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಟ್ರೆಕಿಂಗ್ ಗೆ ಹೋಗಿ ನಾಪತ್ತೆಯಾಗಿದ್ದ ಟೆಕ್ಕಿ ಕಲ್ಲು ಕ್ವಾರಿಯಲ್ಲಿ ಶವವಾಗಿ ಪತ್ತೆ

ಟ್ರೆಕ್ಕಿಂಗ್ ಹೋಗಿದ್ದ ವೇಳೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಟೆಕ್ಕಿ ಶವವಾಗಿ ಪತ್ತೆಯಾಗಿದ್ದಾನೆ.

ಬೆಂಗಳೂರು ಹೊರವಲಯದ ಜಿಗಣಿ ಸಮೀಪದ ಯಲ್ಲಮ್ಮನದೊಡ್ಡಿಯಲ್ಲಿ ಕಲ್ಲು ಕ್ವಾರಿಯಲ್ಲಿ ಟೆಕ್ಕಿ ಶವ ಪತ್ತೆಯಾಗಿದೆ. ವಿನಯ್ ಮೃತ ಟೆಕ್ಕಿ. ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಸೇರಿದಂತೆ ಈಶ್ವರ್ ಮಲ್ಪೆ ಮುಳುಗು ತಜ್ಞರ ತಂಡದಿಂದ ಎರಡು ದಿನಗಳಿಂದ ಕಲ್ಲು ಕ್ವಾರಿಯ ನೀರಿನಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ನಿರಂತರ ಹುಡುಕಾಟದ ಬಳಿಕ ಕೊನೆಗೂ ಮೃತದೇಹ ಪತ್ತೆಯಾಗಿದೆ.

ಸದ್ಯ ಮೃತದೇಹವನ್ನ ಅತ್ತಿಬೆಲೆಯ ಆಕ್ಸ್‌ಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆಂಧ್ರಪ್ರದೇಶ ಮೂಲದ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ವಿನಯ್ ಬೆಂಗಳೂರಿನ ಹಲಸೂರಿನಲ್ಲಿ ವಾಸವಿದ್ದರು. ಗಾಂಧಿ ಜಯಂತಿ ರಜೆ ಹಿನ್ನೆಲೆ ಟ್ರಕ್ಕಿಂಗ್ ಪ್ಲ್ಯಾನ್ ಮಾಡಿದ್ದು, ಬಿಎಲ್‌ಆರ್ ಹೈಕ್ ಎಂಬ ಇನ್ಸ್ಟಾ ಗ್ರೂಪ್ ಮೂಲಕ ಎಂಟು ಜನರ ತಂಡ ಟ್ರೆಕ್ಕಿಂಗ್ ತೆರಳಿದ್ದರು.

ಟ್ರೆಕ್ಕಿಂಗ್ ವೇಳೆ ವಿನಯ್ ಸೇರಿದಂತೆ ಇಡೀ ತಂಡ ಕಲ್ಲು ಕ್ವಾರಿಯಲ್ಲಿ ಈಜಲು ತೆರಳಿತ್ತು. ಕಲ್ಲು ಕ್ವಾರಿಯ ಮೇಲಿನಿಂದ ಯುವಕ-ಯುವತಿಯರ ತಂಡ ನೀರಿಗೆ ಡೈವ್ ಹೊಡೆದು ಮೋಜುಮಸ್ತಿ ಮಾಡಿದ್ದರು. ಈ ವೇಳೆ ಟೆಕ್ಕಿ ವಿನಯ್ ಏಕಾಏಕಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button