ಪ್ರಗತಿವಾಹಿನಿ ಸುದ್ದಿ: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ರಾಜ್ಯದಲ್ಲಿ ಅಂತದ್ದೇ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಪತ್ನಿ ಕಾಟಕ್ಕೆ ಬೇಸತ್ತು ಇಬ್ಬರು ಕಾನ್ಸ್ ಟೇಬಲ್ ಗಳು ಸಾವಿಗೆಶರಣಾದ ಘಟನೆ ನಡೆದಿತ್ತು. ಈ ಘಟನೆಗಳು ಮಾಸುವ ಮುನ್ನವೇ ಸಾಫ್ಟ್ ವೇರ್ ಇಂಜಿನಿಯರ್ ಓರ್ವರು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.
ಪ್ರಮೋದ್ (35) ಆತ್ಮಹತ್ಯೆಗೆ ಶರಣಾಗಿರುವ ಟೆಕ್ಕಿ. ಪತ್ನಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಬೆಂಗಳುರಿನಲ್ಲಿ ಬೆಂಜ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಮೋದ್ ಡಿ.29ರಂದು ಮನೆಯಿಂದ ಹೊರ ಹೋಗಿದ್ದರು. ಆ ಬಳಿಕ ಮನೆಗೆ ಬಂದಿರಲಿಲ್ಲ. ಗೊರೂರು ಸಮೀಪ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪತಿಯ ಸಾವಿನ ಸುದ್ದಿ ಕೇಳಿ ಮೃತದೇಹ ನೋಡಲು ಕೈಯಲ್ಲಿ ಮಗು ಹೊತ್ತುಕೊಂಡು ಬಂದಿದ್ದ ಪತ್ನಿ ಮೇಲೆ ಪ್ರಮೋದ್ ಕುಟುಂಬಸ್ಥರು ಹಲ್ಲೆಗೆ ಯತ್ನಿಸಿದ ಘಟನೆ ಕೂಡ ನಡೆದಿದೆ.
ಆಲೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ