*ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ತಾಂತ್ರಿಕ ಸಮಸ್ಯೆ: ಸಚಿವ ಎಂ.ಬಿ.ಪಾಟೀಲ*
ಪ್ರಗತಿವಾಹಿನಿ ಸುದ್ದಿ : ವಿವಿಧ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಗಳಿಗೆ ಸಂಬಂಧಿಸಿ ಅಭಿವೃದ್ಧಿ ಯೋಜನೆಗಳಿಗೆ ತಾಂತ್ರಿಕ ಅಡಚಣೆಗಳು ಎದುರಾಗಿವೆ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ತಿಳಿಸಿದರು.
ಈ ಕುರಿತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ವಿಜಯಪುರ, ಹಾಸನ ಸೇರಿ ವಿವಿಧ ವಿಮಾನ ನಿಲ್ದಾಣಗಳು ಮತ್ತು ಏರ್-ಸ್ಟ್ರಿಪ್ ಅಭಿವೃದ್ಧಿ ನಡೆಯುತ್ತಿರುವ ಯೋಜನೆಗಳಿಗೆ ಸೂಕ್ತ ಪ್ರಮಾಣದಲ್ಲಿ ಅಗತ್ಯ ಭೂಮಿ ಸಿಕ್ಕಿಲ್ಲ. ಈ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕು ಎಂದು ಸಚಿವರು ಸಮಾಲೋಚನೆ ನಡೆಸಿದರು.
219 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಯಚೂರು ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣದ ಕಾಮಗಾರಿ ಆರಂಭಕ್ಕೆ ಎದುರಾಗಿರುವ ತಾಂತ್ರಿಕ ಅಡಚಣೆಗಳಿಗೆ ಕೂಡಲೇ ಬಗೆಹರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹಾಸನ ವಿಮಾನ ನಿಲ್ದಾಣದ ಕಾಮಗಾರಿ ತ್ವರಿತವಾಗಿ ಮುಗಿಸಿ, ಅಲ್ಲದೇ ಉಡಾನ್ ಯೋಜನೆ ಸ್ಥಗಿತಗೊಂಡಿದ್ದಕ್ಕೆ ಬೀದರ್ ಏರ್‌ಪೋರ್ಟ್‌ನಲ್ಲಿ ವಿಮಾನಗಳ ಹಾರಾಟ ಸ್ಥಗಿತವಾಗಿದೆ. ಈ ಸಂಬಂಧ ವಿಮಾನಯಾನ ಸಂಸ್ಥೆಗಳ ಜತೆ ಚರ್ಚಿಸಿ ಅಗತ್ಯಕ್ರಮ ಕೈಗೊಳ್ಳಿ ಎಂದರು. ಅದೇ ರೀತಿ ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣವಾಗಿದ್ದು ಅಗತ್ಯ ಇರುವ ಅಗ್ನಿಶಾಮಕ ವಾಹನಗಳನ್ನು ಖರೀದಿಸಲು ತ್ವರಿತವಾಗಿ ಕ್ರಮ ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ