Karnataka NewsLatest

*ಬೆಂಗಳೂರಿನ ಲಾಡ್ಜ್ ರೂಮಿನಲ್ಲಿ ಶವಾಗಿ ಪತ್ತೆಯಾದ ತೀರ್ಥಹಳ್ಳಿ ತಹಶೀಲ್ದಾರ್*

ಶಿವಮೊಗ್ಗ: ಬೆಂಗಳೂರಿನ ಲಾಡ್ಜ್ ನಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲುಕಿನ ತಹಶೀಲ್ದಾರ್ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ತೀರ್ಥಹಳ್ಳಿ ತಹಶೀಲ್ದಾರ್ ಜಕ್ಕಣ್ಣ ಗೌಡರ್, ಬೆಂಗಳೂರಿನ ಗಾಂಧಿನಗರದ ಲಾಡ್ಜ್ ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಕೋರ್ಟ್ ಕೆಲಸದ ನಿಮತ್ತ ಬೆಂಗಳೂರಿಗೆ ತೆರಳಿದ್ದ ಜಕ್ಕಣ್ಣ ಲಾಡ್ಜ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬುಧವಾರ ಮಧ್ಯಾಹ್ನದಿಂದ ಕುಟುಂಬದವರು ಹಾಗೂ ಅಧಿಕಾರಿಗಳ ಫೋನ್ ಕರೆಗೂ ಸಿಗದ ಕಾರಣ ಪೊಲೀಸರು ಹುಡುಕಾಟ ನಡೆಸಿದ್ದರು. ಮೊಬೈಲ್ ಲೊಕೇಷನ್ ಚೆಕ್ ಮಾಡಿದಾಗ ಗಾಂಧಿನಗರದ ಲಾಡ್ಜ್ ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಗದಗ ಮೂಲದ ಜಕ್ಕಣ್ಣ ಕಳೆದ ಒಂದು ವರ್ಷದಿಂದ ತೀರ್ಥಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಜನರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ಇದೀಗ ಏಕಾಏಕಿ ಸಾವನ್ನಪ್ಪಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಜಕ್ಕಣ್ಣ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button