Kannada NewsKarnataka News
ತಹಸಿಲ್ದಾರ್ ಕಾರಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಪೊಲೀಸ್

ಪ್ರಗತಿವಾಹಿನಿ ಸುದ್ದಿ, ಮಾಂಜರಿ – ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ ಸ್ಟೆಬಲ್ ಕುಡಿದ ಅಮಲಿನಲ್ಲಿ ತಹಸಿಲ್ದಾರ್ ಖಾಸಗಿ ಕಾರಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾನೆ.
ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ಈಗ ಸ್ವಲ್ಪ ಹೊತ್ತಿನ ಮೊದಲು ಘಟನೆ ನಡೆದಿದೆ.
ಕಾಗವಾಡ ತಹಶಿಲ್ದಾರರ ಪ್ರಮೀಳಾ ದೇಶಪಾಂಡೆ ಹಾಗೂ ಕಾರು ಚಾಲನೆ ಮಾಡುತ್ತಿದ್ದ ಅವರ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕೋಡಿಯಿಂದ ತಮ್ಮ ಖಾಸಗಿ ವಾಹನದಲ್ಲಿ ಕರ್ತವ್ಯಕ್ಕೆ ಕಾಗವಾಡಕ್ಕೆ ಹೋಗುವಾಗ ಚಿಕ್ಕೋಡಿ ತಾಲುಕಿನ ಮಾಂಜರಿ ಗ್ರಾಮದ ಬಳಿ ಪೊಲೀಸ್ ಕಾನ್ ಸ್ಟೆಬಲ್ ಬೈಕ್ ತಹಶಿಲ್ದಾರರ ವಾಹನಕ್ಕೆ ಡಿಕ್ಕಿ ಹೊಡೆದಿದೆ .
ತಹಶಿಲ್ದಾರ ಪ್ರಮೀಳಾ ದೇಶಪಾಂಡೆ ಅವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಪೊಲೀಸ್ ಕಾನ್ ಸ್ಟೆಬಲ್ ಶಿವಾನಂದ ಪಾಟೀಲ್ ಗೆ ಗಂಭೀರ ಗಾಯಗೊಂಡಿದ್ದಾರೆ. ಚಿಕ್ಕೋಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲಿಸ್ ಕಾನ್ ಸ್ಟೆಬಲ್ ಅಥಣಿ ತಾಲೂಕಿನ ಐಗಳಿ ಠಾಣೆ ಸಿಬ್ಬಂದಿಯಾಗಿದ್ದು, ಕೊಗನೋಳಿ ಚೆಕ್ ಪೋಸ್ಟ್ ಕರ್ತವ್ಯಕ್ಕೆ ಹೋಗುತ್ತಿದ್ದರು. ಅವರು ಕುಡಿದು ಬೈಕ್ ಓಡಿಸುತ್ತಿದ್ದರು ಎಂದು ಸ್ಥಳೀಯರು ಪ್ರಗತಿವಾಹಿನಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರ ಏಟು ಯುವಕನ ಸಾವಿಗೆ ಕಾರಣವಾಯ್ತಾ?
ಯುವ ಅಧಿಕಾರಿಗಳಿಬ್ಬರ ಜೋಡಿ: ಬೆಳಗಾವಿಗೆ ಕೀರ್ತಿಯ ಗರಿ




