Belagavi NewsBelgaum NewsKarnataka News

*ತಹಶೀಲ್ದಾರ್ ಕಚೇರಿ ಚೇಂಬರ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನೌಕರ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಹಶೀಲ್ದಾರ್ ಕಚೇರಿಯ ಸಿಬ್ಬಂದಿ ತಹಶಿಲ್ದಾರ್ ಬಸವರಾಜ್ ನಾಗರಾಳ ಚೇಂಬರ್ ನಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 

ರುದ್ರಣ್ಣ ಯಡಣ್ಣವರ ಎಸ್ ಡಿ ಎ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ಕಚೇರಿ ಬಾಗಿಲು ತಗೆದಾಗ ಘಟನೆ ಬೆಳಕಿಗೆ ಬಂದಿದೆ.

Home add -Advt

ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಖಡೆಬಜಾರ್ ಪೊಲೀಸರು, ತಹಶಿಲ್ದಾರ್ ಬಸವರಾಜ ನಾಗರಾಳ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‌ ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button