
ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆ ಮಾರ್ಗೋಪಾಯಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಸಂಚಾರದಟ್ಟಣೆ ನಿಯಂತ್ರಿಸಲು ರಾಜ್ಯ ಸರ್ಕಾರ ಸುರಂಗ ರಸ್ತೆ ನಿರ್ಮಾಣಕ್ಕೆ ಮುಂದಾಗಿದೆ. ಸುರಂಗ ರಸ್ತೆ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ತೇಜಸ್ವಿ ಸೂರ್ಯ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಗೆ ತೇಜಸ್ವಿ ಸಮಯಾವಕಾಶವನ್ನು ಕೇಳಿದ್ದರು. ಈ ಹಿನ್ನೆಲೆಯಲ್ಲಿ ಡಿಸಿಎಂ ಇಂದು ಭೇಟಿಗೆ ಅವಕಾಶ ನೀಡಿದ್ದರು. ಈ ನಿಟ್ಟಿನಲ್ಲಿ ತೇಜಸ್ವಿ ಸೂರ್ಯ ಡಿಸಿಎಂ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.




