

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಖ್ಯಾತ ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್ ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಸ್ಕಂದಪ್ರಸಾದ್ ಅದ್ದೂರು ವಿವಾಹ ಕಾರ್ಯಕ್ರಮ ನೆರವೇರಿತು. ಮದುವೆ ಎರಡು ಕುಟುಂಬಗಳ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿತ್ತು.
ಇಂದು ಬೆಳಿಗ್ಗೆ 10:45ರ ತುಲಾ ಲಗ್ನದಲ್ಲಿ ತೇಜಸ್ವಿ ಸೂರ್ಯ ಶಿವಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೇಂದ್ರ ಸಚಿವ ವಿ.ಸೋಮಣ್ಣ, ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈವಿಜಯೇಂದ್ರ, ಸಂಸದ ಡಾ.ಮಂಜುನಾಥ್ ಸೇರಿದಂತೆ ಹಲವು ನಾಯಕರು ನವ ಜೋಡಿಗಳಿಗೆ ಶುಭ ಕೋರಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ