Kannada NewsKarnataka NewsLatestPolitics

*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ತೇಜಸ್ವಿನಿ ಅನಂತಕುಮಾರ್*

ಕುತೂಹಲ ಮೂಡಿಸಿದ ಚರ್ಚೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ತೇಜಸ್ವಿನಿ ಅನಂತಕುಮಾರ್, ಸುಮಾರು 45 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಡಿ.ಕೆ.ಶಿವಕುಮಾರ್ ಭೇಟಿ ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಇತ್ತೀಚಿನ ದಿನಗಳಲ್ಲಿ ಆಪರೇಷನ್ ಹಸ್ತ ವಿಚಾರ ಭಾರಿ ಚರ್ಚೆಯಲ್ಲಿರುವಗಲೇ ಬಿಜೆಪಿಯ ಹಾಲಿ ಹಾಗೂ ಮಾಜಿ ಸಾಲು ಸಾಲು ಶಾಸಕರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸುತ್ತಿದ್ದು, ಈ ಬೆಳವಣಿಗೆ ನಡುವೆಯೇ ಇದೀಗ ತೇಜಸ್ವಿನಿ ಅನಂತಕುಮಾರ್ ಡಿ.ಕೆ.ಶಿವಕುಮಾರ್ ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ.

2019ರಲಿಯೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಅನಂತಕುಮಾರ್ ಅವರಿಗೆ 2024ರಲ್ಲಿಯೂ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡುವುದು ಅನುಮಾನ ಎನ್ನಲಾಗುತ್ತಿದೆ. ಈ ಚರ್ಚೆ ಬೆನ್ನಲ್ಲೇ ತೇಜಸ್ವಿನಿ ಅನಂತಕುಮಾರ್, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ರಾಜ್ಯ ರಾಜಕೀಯದಲ್ಲಿ ಕುತೂಹಲ ಇಮ್ಮಡಿಗೊಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button