ಪ್ರಗತಿವಾಹಿನಿ ಸುದ್ದಿ: ಎರಡು ದಿನಗಳ ಹಿಂದಷ್ಟೇ ವಿಧಾನಪರಿಷತ್ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ತೇಜಸ್ವಿನಿ ಗೌಡ ಇಂದು ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಜೈರಾಮ್ ರಮೇಶ್, ಪವನ್ ಖೇರಾ ಸಮ್ಮುಖದಲ್ಲಿ ತೇಜಸ್ವಿನಿ ಗೌಡ ಕಾಂಗ್ರೆಸ್ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದಾರೆ.
ಈ ವೇಳೆ ಮಾತನಾಡಿದ ತೇಜಸ್ವಿನಿ ಗೌಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ. ಪ್ರತಾಪ್ ಸಿಂಹ, ಸಿ.ಟಿ.ರವಿಯಂತವರಿಗೆ ಟಿಕೆಟ್ ಕೊಟ್ಟಿಲ್ಲ. ಬಿಜೆಪಿಯಲ್ಲಿ ಅಂದು ಬರಗಾಲವಿತ್ತು. ಇಂದು ಸಮೃದ್ಧವಾಗಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ನಲ್ಲಿ ಇಂದು ಬರ ಇದೆ. ಕಷ್ಟದ ಸ್ಥಿತಿ ಇದೆ. ದೇಶದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ ನಲ್ಲಿ ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಚುನಾವಣಾ ಪ್ರಚಾರ ಮಾಡುವುದಾಗಿ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ