Latest

ಅನ್ ಲಾಕ್-3.0 ಗೆ ಪ್ಲ್ಯಾನ್: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಅನ್ ಲಾಕ್-3.0 ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಸಂಜೆ ಸಿಎಂ ಬಿ.ಎಸ್.ಯದಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ನಿರ್ಧಾರ ಹೊರಬೀಳಲಿದೆ.

ಇಂದು ಸಂಜೆ 5:30ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಯಲಿದ್ದು, ಜುಲೈ 5ರ ಬಳಿಕ ಮೂರನೇ ಹಂತದ ಲಾಕ್ ಡೌನ್ ಸಡಿಲಿಕೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Home add -Advt

ವಾಣಿಜ್ಯ ಚಟುವಟಿಕೆಗಳಿಗೆ ಇನ್ನಷ್ಟು ಅವಕಾಶ ನೀಡುವುದರ ಜೊತೆಗೆ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ತೆರವಿಗೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಮಾರುಕಟ್ಟೆ ಹೊರತುಪಡಿಸಿ ಸಂಪೂರ್ಣ ಲಾಕ್ ಡೌನ್ ತೆರವು ಮಾಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. ಒಟ್ಟಾರೆ ಸಂಜೆ ನಡೆಯಲಿರುವ ಸಭೆಯಲ್ಲಿ ಅನ್ ಲಾಕ್ 3.0 ಭವಿಷ್ಯ ನಿರ್ಧಾರವಾಗಲಿದೆ.

ಮಿಸ್ಸಿ ರೋಗಕ್ಕೆ 5 ವರ್ಷದ ಬಾಲಕಿ ಬಲಿ

Related Articles

Back to top button