
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷೆ ಹಾಗೂ ಚಿಕ್ಕೋಡಿ ಜಿಲ್ಲಾ ಕೆಪಿಸಿಸಿ ಮಹಿಳಾ ಮೋರ್ಚಾದ ಅಧ್ಯಕ್ಷೆ ತೇಜಸ್ವಿನಿ ಅರ್ಜುನ ನಾಯಿಕವಾಡಿ (51) ಇಂದು ಮುಂಜಾನೆ ಕೆಎಲ್ಇ ಆಸ್ಪತ್ರೆಯಲ್ಲಿ ನಿಧನರಾದರು.
ತಮ್ಮ ಮೃದು ಸ್ವಭಾವದದ ವ್ಯಕ್ತಿತ್ವದಿಂದ ಪರಿಚಿತರಾಗಿದ್ದ ರಾಯಬಾಗ ತಾಲೂಕು ಕಂಕಣವಾಡಿ ಮೂಲದವರಾದ ತೇಜಸ್ವಿನಿ ಅವರು, ಕೆಲವು ದಿನಗಳ ಹಿಂದಷ್ಟೆ ಕೋವಿಡ್ ನಿಂದ ಗುಣಮುಖರಾಗಿದ್ದರು. ಆದರೆ ಕಡಿಮೆ ರಕ್ತದೊತ್ತಡದ ಕಾರಣಕ್ಕೆ ಆಕಸ್ಮಿಕವಾಗಿ ಇಂದು ಮುಂಜಾನೆ ತೀರಿಕೊಂಡರು.
ಇಂದು ಮಧ್ಯಾಹ್ನ ಕಂಕಣವಾಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮೃತರು 2003-2005 ರ ಕಾಲಾವಧಿಯಲ್ಲಿ ಬೆಳಗಾವಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆಯಾಗಿದ್ದರು. ಕಾಂಗ್ರೆಸ್ ಪಕ್ಷದ ಸಂಘಟನೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಕೋವಿಡ್ ಸಂದರ್ಭದಲ್ಲಿ ಹಲವಾರು ಕುಟುಂಬಗಳಿಗೆ ನೆರವಾಗುವ ಮೂಲಕ ಔದಾರ್ಯ ಮೆರೆದಿದ್ದರು.
ಮೃತರು ಪತಿ, ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ