Latest

ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ ನಟಿ ತೇಜಸ್ವಿನಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳ್ಳಿತೆರೆ ಹಾಗೂ ಕಿರುತೆರೆ ಎರಡರಲ್ಲಿಯೂ ಜನಪ್ರಿಯತೆ ಪಡೆದಿರುವ ನಟಿ ತೇಜಸ್ವಿನಿ ಪ್ರಕಾಶ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು, ತೇಜಸ್ವಿನಿ ಮನೆಯಲ್ಲಿ ಮದುವೆ ಸಂಭ್ರಮ ಕಳೆಕಟ್ಟಿದೆ.

ತೇಜಸ್ವಿನಿ ಅವರ ಅರಿಷಿಣ ಶಾಸ್ತ್ರ ಅದ್ಧೂರಿಯಾಗಿ ನೆರವೇರಿದ್ದು, ಸ್ಯಾಂಡಲ್ ವುಡ್ ನಟಿಯರು ಅರಿಷಿಣ ಶಾಸ್ತ್ರದಲ್ಲಿ ಭಾಗವಹಿಸಿ ಶುಭಕೋರಿದ್ದಾರೆ.

ತೇಜಸ್ವಿನಿ 2007ರಲ್ಲಿ ಮಸಣದ ಮಕ್ಕಳು ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ 22 ಚಿತ್ರಗಳಲ್ಲಿ ಅಭಿನಯಿಸಿರುವ ತೇಜಸ್ವಿನಿ ಪ್ರಕಾಶ್ ಗಜ, ರಾಬರ್ಟ್, ಮಾತಾಡ್ ಮಾತಾಡ್ ಮಲ್ಲಿಗೆ, ಪ್ರೀತಿ ಏಕೆ ಭೂಮಿ ಮೇಲಿದೆ, ಅರಮನೆ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಬಿಗ್ ಬಾಸ್ ಕನ್ನಡ ಸೀಜನ್ ನಲ್ಲಿಯೂ ಸ್ಪರ್ಧಿಸಿದ್ದ ತೇಜಸ್ವಿನಿ ನನ್ನರಸಿ ರಾಧೆ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ.
ವ್ಯಕ್ತಿಯ ಮೇಲೆ‌ ಮಲಗಿದ ಮೊಸಳೆ!

Related Articles

Back to top button