ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ
ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹತ್ತು ವರ್ಷಗಳ ಬಳಿಕ ಜಯಭೇರಿ ಭಾರಿಸಿದ್ದು, ಆಡಳಿತಾರೂಢ ಬಿಆರ್ ಎಸ್ ತೀವ್ರ ಮುಖಭಂಗ ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕೆ.ಚಂದ್ರಶೇಖರ್ ರಾವ್ ರಾಜೀನಾಮೆ ನೀಡಿದ್ದಾರೆ.
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 64 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಬಿಆರ್ ಎಸ್ 38 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಪಕ್ಷದ ಸೋಲಿನ ಹಿನ್ನೆಲೆಯಲ್ಲಿ ಸಿಎಂ ಚಂದ್ರಶೇಖರ್ ರಾವ್ ರಾಜೀನಾಮೆ ಸಲ್ಲಿಸಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ಆಪ್ತಸಹಾಯಕನ ಮೂಲಕವಾಗಿ ರಾಜ್ಯಪಾಲರಿಗೆ ತಲುಪಿಸಿದ್ದು, ಬಳಿಕ ಸ್ವಂತ ಕಾರಿನಲ್ಲಿ ಫಾರ್ಮ್ ಹೌಸ್ ಗೆ ತೆರಳಿದ್ದಾರೆ.
ಇನ್ನು ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆಯಲ್ಲಿ ನಾಳೆ ಹೈದರಾಬಾದ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆಯಾಗಲಿದೆ. ರೇವಂತ್ ರೆಡ್ಡಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವ ನಿರೀಕ್ಷೆ ಇದ್ದು, ನಾಳೆ ಸಂಜೆಯೊಳಗೆ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ