
ಅಭಿವೃದ್ಧಿ ಎಂಬುದು ಮ್ಯಾಜಿಕ್ ಅಲ್ಲ, ಇದರ ಸಾಧನೆಗೆ ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆ ಅತ್ಯಗತ್ಯ
ಪ್ರಗತಿವಾಹಿನಿ ಸುದ್ದಿ: “ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಹೈದರಾಬಾದ್ ನಲ್ಲಿ ಸೋಮವಾರ ನಡೆದ ತೆಲಂಗಾಣ ರೈಸಿಂಗ್ ಜಾಗತಿಕ ಸಮ್ಮೇಳನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.
“ತೆಲಂಗಾಣವು ಬೆಂಗಳೂರು ಹಾಗೂ ಕರ್ನಾಟಕದ ಜೊತೆ ಸ್ಪರ್ಧಿಸುತ್ತಿದೆಯೇನೋ ಅಂತ ಅಂದುಕೊಂಡಿದ್ದೆ. ಆದರೆ ಜಾಗತಿಕ ಮಟ್ಟದಲ್ಲಿ ತೆಲಂಗಾಣ ಗುರುತಿಸಿಕೊಳ್ಳುತ್ತಿದೆ. ತೆಲಂಗಾಣ ಸರ್ಕಾರ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವುದು ಸಂತಸದ ವಿಚಾರ. ಈ ಸಂದರ್ಭದಲ್ಲಿ ಇಂತಹ ಪ್ರಯತ್ನಕ್ಕೆ ಮುಂದಾಗಿರುವ ತೆಲಂಗಾಣ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಇಂದು ನನ್ನ ಸ್ನೇಹಿತರಾದ ರೇವಂತ್ ರೆಡ್ಡಿ ಅವರಿಗಾಗಿ ಬಂದಿದ್ದೇನೆ” ಎಂದರು.
“ಹೈದರಾಬಾದ್ ದೊಡ್ಡನಗರ, 2047ರ ವೇಳೆಗೆ ಇದು ಯಾವ ಮಟ್ಟಕ್ಕೆ ಬೆಳೆಯಲಿದೆ ಎಂಬುದರ ಚಿತ್ರಣ ಕೊಡುತ್ತಿದೆ. “ಜೊತೆಗೂಡುವುದು ಆರಂಭ, ಜೊತೆಗೂಡಿ ಚರ್ಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು.” ಮುಂದಿನ ಪೀಳಿಗೆಗೆ ನೀವು ರೂಪಿಸುತ್ತಿರುವ ಯೋಜನೆ ಉತ್ತಮವಾಗಿದೆ” ಎಂದು ತಿಳಿಸಿದರು.
“ಈ ಸಮ್ಮೇಳನವು ಇವತ್ತಿನ ಬಗ್ಗೆ ಆಲೋಚನೆಮಾಡುತ್ತಿಲ್ಲ. ಭವಿಷ್ಯದ ಬಗ್ಗೆ ಚಿಂತನೆ ನಡೆಸಿದೆ. 10 ವರ್ಷಗಳ ನಂತರ ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿ, ಈ ಸರ್ಕಾರಕ್ಕೆ ವಿಶ್ವಾಸ ತುಂಬಿದ ಜನರಿಗೆ ಅಭಿನಂದನೆಗಳು. ಸಿಎಂ ರೇವಂತ್ ರೆಡ್ಡಿ ಹಾಗೂ ಅವರ ಸಂಪುಟ ಸಚಿವರು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಭವಿಷ್ಯದತ್ತ ಹೆಜ್ಜೆ ಹಾಕೋಣ” ಎಂದರು.
“ನಮ್ಮ ರಾಜ್ಯದಲ್ಲಿ ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದರೂ ಇಲ್ಲಿಗೆ ಬಂದಿದ್ದೇನೆ. ಇಡೀ ದಕ್ಷಿಣ ಭಾರತ ತೆಲಂಗಾಣ ರಾಜ್ಯದ ಬೆನ್ನಿಗೆ ನಿಲ್ಲುವ ಮೂಲಕ ದೇಶದ ಪ್ರಗತಿಗೆ ಶ್ರಮಿಸಲಿದೆ. ನಾನು ಇಲ್ಲಿ ಕರ್ನಾಟಕದ ಡಿಸಿಎಂ ಆಗಿ ಮಾತ್ರ ಬಂದಿಲ್ಲ. ದಕ್ಷಿಣ ಭಾರತದ ಧ್ವನಿಯಾಗಿ ಬಂದಿದ್ದೇನೆ. ದೇಶದ ಪ್ರಗತಿಯಲ್ಲಿ ದಕ್ಷಿಣ ಭಾರತದ ಕೊಡುಗೆ ಅಪಾರ” ಎಂದು ತಿಳಿಸಿದರು.
“ತೆಲಂಗಾಣ ರಾಜ್ಯದ ಜಾಗತಿಕ ದೃಷ್ಟಿಕೋನವನ್ನು ಗಮನಿಸಿದೆ. ತೆಲಂಗಾಣ ಚಿಕ್ಕ ರಾಜ್ಯ. ದೇಶದ ಐಟಿ ರಫ್ತಿನಲ್ಲಿ ಬೆಂಗಳೂರು 43% ಪಾಲು ಹೊಂದಿದೆ. ತೆಲಂಗಾಣ ಈ ವಿಚಾರದಲ್ಲಿ ಕಡಿಮೆ ಇದ್ದರೂ ಈ ರಾಜ್ಯದ ದೂರದೃಷ್ಟಿ, ಆಲೋಚನೆ ಬಹಳ ದೊಡ್ಡದಾಗಿದೆ. ನಿಮಗೆ ಬೆಂಬಲ ನೀಡಲು ನಾನು ಈ ಕಾರ್ಯಕ್ರಮಕ್ಕೆ ಬಂದಿರುವೆ. ದೇಶದ ಪ್ರಗತಿಯ ಬಗ್ಗೆ ಚರ್ಚೆ ಮಾಡುವಾಗ ಬೆಂಗಳೂರು ಹಾಗೂ ಹೈದರಾಬಾದ್ ಕೊಡುಗೆ ಸ್ಮರಿಸದೆ ಚರ್ಚೆ ಪೂರ್ಣವಾಗುವುದಿಲ್ಲ. ಕೆಲವರು, ಬೆಂಗಳೂರಿಗೆ ಹೈದರಾಬಾದ್ ಪ್ರತಿಸ್ಪರ್ಧಿ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಸತ್ಯ ಬೇರೆಯದೆ ಇದೆ. ನಾವು ಸ್ಪರ್ಧಿಗಳಲ್ಲ. ಪರಸ್ಪರ ಸಹಕಾರ ನೀಡಿ, ಜೊತೆಯಾಗಿ ಪ್ರಗತಿ ಸಾಧಿಸುವ ಮೂಲಕ ಭವಿಷ್ಯ ಭಾರತ ನಿರ್ಮಾಣಕ್ಕೆ ಕೊಡುಗೆಯಾಗೋಣ. ನಾನು ರತನ್ ಟಾಟಾ ಅವರನ್ನು ಭೇಟಿಯಾದಾಗ ಅವರು ನನಗೆ ಒಂದು ಮಾತು ಹೇಳಿದರು. “ನೀವು ವೇಗವಾಗಿ ಸಾಗಬೇಕಾದರೆ ಒಬ್ಬರೇ ಸಾಗಿ, ನೀವು ಬಹುದೂರ ಸಾಗಬೇಕಾದರೆ ಒಟ್ಟಿಗೆ ಸಾಗಿ” ಎಂದು ಸಲಹೆ ನೀಡಿದ್ದರು. ಅದರಂತೆ ನಾವು ಒಟ್ಟಾಗಿ ಸಾಗೋಣ. ಈ ಎರಡು ನಗರಗಳ ಪ್ರಗತಿಗೆ ಸಹಕರಿಸೋಣ” ಎಂದರು.
“ದಕ್ಷಿಣ ಭಾರತವು ದೇಶದ ಜಿಡಿಪಿಯಲ್ಲಿ 31% ಕೊಡುಗೆ ನೀಡಿದೆ. ಮುಂದೆ ಇದು 43% ಏರಿಕೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನ ಬಗ್ಗೆ ನಾನು ಹೆಚ್ಚು ಮಾತನಾಡಿದರೆ ನಿಮಗೆ ಸ್ಪರ್ಧೆ ನೀಡುತ್ತಿರುವಂತೆ ಭಾಸವಾಗುತ್ತದೆ. ಹೀಗಾಗಿ ಬೆಂಗಳೂರಿನ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಕ್ಯಾಲಿಫೋರ್ನಿಯಾದಲ್ಲಿ 13 ಲಕ್ಷ ಇಂಜಿನಿಯರ್ ವೃತ್ತಿಪರರು ಇದ್ದರೆ, ಬೆಂಗಳೂರಿನಲ್ಲಿ 25 ಲಕ್ಷ ಇಂಜಿನಿಯರ್ ಗಳು ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ ಕೂಡ ಉತ್ತಮ ಸಾಮರ್ಥ್ಯ ಹೊಂದಿದೆ. ನಾವು ಒಟ್ಟಾಗಿ ಶ್ರಮಿಸೋಣ” ಎಂದು ಕರೆ ನೀಡಿದರು.
“ಇಲ್ಲಿ ಪಾರದರ್ಶಕವಾದ ಮಾದರಿ ಪರಿಚಯಿಸಲಾಗುತ್ತಿದ್ದು, ಈ ನಗರ ಆರೋಗ್ಯ, ತಂತ್ರಜ್ಞಾನ, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕ್ಷಮತೆ ಹೊಂದಿದೆ. ದಕ್ಷಿಣ ಭಾರತದಲ್ಲಿರುವ ಮಾನವ ಸಂಪನ್ಮೂಲ ಬೇರೆ ಯಾವುದೇ ರಾಜ್ಯ ಅಥವಾ ದೇಶದಲ್ಲಿಲ್ಲ. ಈ ಕಾರ್ಯಕ್ರಮಕ್ಕೆ ಜಗತ್ತಿನ ಪ್ರಮುಖ ಕೈಗಾರಿಕೋದ್ಯಮಿಗಳು ಬಂದಿದ್ದು, ತೆಲಂಗಾಣ ರಾಜ್ಯ ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿ ಉತ್ತಮ ದೂರದೃಷ್ಟಿ ಹೊಂದಿದೆ” ಎಂದು ತಿಳಿಸಿದರು.
“ರೇವಂತ್ ರೆಡ್ಡಿ ಅವರ ನಾಯಕತ್ವದಲ್ಲಿ ಸಚಿವರು, ಅಧಿಕಾರಿಗಳು ಒಟ್ಟಿಗೆ ಶ್ರಮಿಸಿ, ತೆಲಂಗಾಣ ರಾಜ್ಯವನ್ನು ಜಾಗತಿಕ ಮಟ್ಟಕ್ಕೆ ಮುನ್ನಡೆಸಲಿದ್ದಾರೆ. ಇವರ ಬೆಂಬಲವಾಗಿ ಕರ್ನಾಟಕ ಸರ್ಕಾರ ನಿಲ್ಲಲಿದೆ. ಇಲ್ಲಿಗೆ ಆಗಮಿಸಿರುವ ಹೂಡಿಕೆದಾರರು ನಮ್ಮ ಮೇಲೆ ವಿಶ್ವಾಸವಿಡಿ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇವೆ” ಎಂದರು.
“ರೇವಂತ್ ರೆಡ್ಡಿ ಹಾಗೂ ಅವರ ಸರ್ಕಾರ ಇದನ್ನು ಸಾಧಿಸಲಿದೆ. ಈ ಸರ್ಕಾರದ ಪ್ರತಿ ಯೋಜನೆ, ಪ್ರತಿ ನಿರ್ಧಾರ ಜನರು ಹಾಗೂ ಮುಂದಿನ ಪೀಳಿಗೆಗಾಗಿ. ನಾವು ಪರಸ್ಪರ ಸ್ಪರ್ಧಿಸದೆ ಒಟ್ಟಾಗಿ ಉಜ್ವಲ ಭವಿಷ್ಯ ರೂಪಿಸಬೇಕಿದೆ” ಎಂದು ತಿಳಿಸಿದರು.
“ಇಲ್ಲಿ ಕೇಂದ್ರ ಸಚಿವರಿದ್ದು, ಭಾರತದ ಭವಿಷ್ಯ ರೂಪಿಸಲು ನಾವು ಇನ್ನಷ್ಟು ಹೆಚ್ಚಿನ ಸಹಕಾರ ನಿರೀಕ್ಷೆಸುತ್ತಿದ್ದೇವೆ” ಎಂದು ತಿಳಿಸಿದರು.
No magic wand for development; requires planning, perseverance and honesty: DCM DK Shivakumar
Hyderabad and Bengaluru are not competitors, but globally recognized cities
Contribution of Hyderabad and Bengaluru to the country is significant
Hyderabad: Deputy Chief Minister DK Shivakumar today said there was no magic wand to achieve development and added that development can be achieved only through consistent planning, perseverance and honesty.
Speaking at the event ‘Telangana Rising: Global Summit’ event at Hyderabad, he said, “I thought Telangana was competing with Bengaluru and Karnataka, but it is only trying to get recognized at a global level. I congratulate the Telangana government for organizing a global summit on the occasion of completing two years in office. I came to this event for my friend Revanth Reddy.”
“This event gives us a picture of how Hyderabad would be by 2047. The event isn’t thinking about today but about the future. The people of Telangana have done well by choosing the Congress government after a gap of 10 years. Revanth Reddy and his Cabinet colleagues are doing a great job, let’s move forward together,” he said.
“I have come here in spite of our Assembly session starting today in Karnataka. I haven’t come here as the DCM of Karnataka but as a voice of South India. South India has contributed significantly to the national growth,” he added.
“Bengaluru has 43% share in IT exports from India. Telangana is a small state but has the foresight and ambition. I have come here to support you. People are trying to project us as competitors. We can cooperate for better growth and contribute to nation’s growth,” he added.
“When I met Ratan Tata, he told me to walk alone if I wanted to walk fast but walk together if I wanted to walk far. There is enough space for both cities, let’s work together. South India contributes 31% of country’s GDP. It is likely to increase to 43% in the future. No other part of the country has as much human resource as South India,” he noted.
“Telangana is doing a good job in taking the city and the state to the global level under the leadership of Revanth Reddy. The Union Ministers are here and we expect more support from the Centre in order to increase our contribution to nation building,” he added.



