ಪ್ರಗತಿವಾಹಿನಿ ಸುದ್ದಿ; ತೆಲಂಗಾಣ: ಚುನಾವಣೆ ವೇಳೆ ಮತದಾರರಿಗೆ ಹಣ ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕರೊಬ್ಬರಿಗೆ ಪ್ರಜಾ ಪ್ರತಿನಿಧಿ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿರುವ ಘಟನೆ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ.
ಪದವಿಧರರಾಗಿರುವ ಮಾಜಿ ಶಾಸಕ ಪಾಯಂ ವೆಂಕಟೇಶ್ವರಲು ಎಂಬ ಅಭ್ಯರ್ಥಿ 2018ರ ವಿಧಾನಸಭಾ ಚುನಾವಣೆಯಲ್ಲಿ ವೋಟಿಗಾಗಿ ಮತದಾರರಿಗೆ ಹಣದ ಆಮಿಷವೊಡ್ಡಿರುವುದು ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ತೆಲಂಗಾಣ ಪ್ರಜಾ ಪ್ರತಿನಿಧಿ ನ್ಯಾಯಾಲಯ 6 ತಿಂಗಳ ಜೈಲು ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿದೆ.
ತೆಲಂಗಾಣದ ಖಮ್ಮಂ ಜಿಲ್ಲೆಯ ಎಸ್ ಟಿ ಮೀಸಲು ಕ್ಷೇತ್ರವಾದ ಪಿನಪಾಕ ಕ್ಷೇತ್ರದಲ್ಲಿ ಪಾಯಂ ವೆಂಕಟೇಶ್ವರಲು ಚುನಾವನೆ ವೇಳೆ ನೀರಿನಂತೆ ಹಣ ಹಂಚಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಕಠಿಣ ನಿಯಮದ ಸುಳಿವು ನೀಡಿದ ಸಿಎಂ; ತಜ್ಞರ ತುರ್ತು ಸಭೆ ಕರೆದ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ