Kannada NewsKarnataka NewsLatest
*ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಪೋಸ್ಟ್; ತೆಲಂಗಾಣ ಮಾಜಿ ಕಾರ್ಪೊರೇಟ್ ಪುತ್ರ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರಕರರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮಾಜಿ ಕಾರ್ಪೊರೇಟರ್ ಪುತ್ರನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ರವಿಕಾಂತ್ ಶರ್ಮಾ (33) ಬಂಧಿತ ಆರೋಪಿ. ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ರವಿಕಾಂತ್ ಶರ್ಮಾ ಬಿಆರ್ ಎಸ್ ಪಕ್ಷದ ಐಟಿ ಸೆಲ್ ಉದ್ಯೋಗಿಯಾಗಿದ್ದಾರೆ.
ತೆಲಂಗಾಣ ಚುನಾವಣೆ ವೇಳೆ ರವಿಕಾಂತ್ ಶರ್ಮಾ, ಕರ್ನಾಟಕ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು. ಕರ್ನಾಟಕದ ವಿದ್ಯುತ್ ಪರಿಸ್ಥಿತಿ ಹಾಗೂ ಗೃಹಜ್ಯೋತಿ ಯೋಜನೆ ಬಗ್ಗೆ ನಕಲಿ ಆಡಿಯೋ ಕ್ಲಿಪ್ ಹರಿಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ರವಿಕಾಂತ್ ಶರ್ಮಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ