Kannada NewsNationalPolitics

*ರಾಜ್ಯಪಾಲೆ ತಮಿಳ್ ಸಾಯಿ ಸೌಂದರರಾಜನ್ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ತೆಲಂಗಾಣದ ರಾಜ್ಯಪಾಲೆ ತಮಿಳ್ ಸಾಯಿ ಸೌಂದರರಾಜನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಲೊಕಸಭಾ ಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ತಮಿಳ್ ಸಾಯಿ ಸೌಂದರರಾಜನ್ ರಾಜೀನಾಮೆ ತೀವ್ರ ಕುತೂಹಲ ಮೂಡಿಸಿದೆ.

ತಮಿಳ್ ಸಾಯಿ ಸೌಂದರರಾಜನ್ ತಮಿಳುನಾಡಿನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ತೆಲಂಗಾಣ ರಾಜ್ಯಪಾಲೆ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಪುದುಚೆರಿಯಲ್ಲಿ ಎನ್ ಆರ್ ಕಾಂಗ್ರೆಸ್-ಬಿಜೆಪಿ ಮೈತ್ರಿಕೂಟದ ಪರವಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳುನಾಡಿನಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ 39 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

Home add -Advt


Related Articles

Back to top button