Latest

ಪ್ರವಾಹ ಭೀತಿ; ರೆಡ್ ಅಲರ್ಟ್ ಘೋಷಣೆ; ಶಾಲಾ-ಕಾಲೇಜುಗಳಿಗೆ ರಜೆ

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಕರ್ನಾಟಕ ಮಾತ್ರವಲ್ಲ ಪಕ್ಕದ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ತೆಲಂಗಾಣದಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆಯಂತೆ ಭಾರಿ ಮಳೆ ಹಿನ್ನೆಲೆಯಲ್ಲಿ ತೆಲಂಗಾಣದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಹೈದರಾಬಾದ್, ತೆಲಂಗಾಣದ ಹಲವೆಡೆಗಳಲ್ಲಿ ಇಂದು ಅತಿ ಹೆಚ್ಚು ಮಳೆಯಾಗಲಿದೆ. ಮುಂದಿನ 4-5 ದಿನಗಳವರೆಗೆ ಭಾರಿ ಮಳೆಯಿಂದ ಹಲವು ಪ್ರದೇಶ ಮುಳುಗುವ ಭೀತಿ ಎದುರಾಗಿದ್ದು, ತೆಲಂಗಾಣದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೈದರಾಬಾದ್ ನಲ್ಲಿ ನಾಳೆಯವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಧಾರಾಕಾರ ಸುರಿಯುತ್ತಿರುವ ಮಳೆಗೆ ಕುಮುರಂ ಭೀಮ್ ಆಸಿಫಾಬಾದ್, ನಿರ್ಮಲ್, ನಿಜಾಮಾಬಾದ್, ಪೆದ್ದಪಲ್ಲಿ, ರಾಜಣ್ಣ ಸಿರ್ಸಿಲ್ಲಾ, ಜಯಶಂಕರ್ ಭೂಪಾಲಪಲ್ಲಿ, ಮುಲುಗು ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ನಲ್ಗೊಂಡ, ಸೂರ್ಯಪೇಟ್, ಮಹಬೂಬಾಬಾದ್, ಜನಾಂವ್, ಯಾದಾದ್ರಿ, ಭುವನಗಿರಿ ಜಿಲ್ಲೆಗಳಲ್ಲಿ ಇಂದುವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೀರಿನಲ್ಲಿ ಕೊಚ್ಚಿ ಹೋಗಿದ್ದ ಕಾರು; 3 ದಿನಗಳ ಬಳಿಕ ಇಬ್ಬರ ಮೃತದೇಹ ಪತ್ತೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button