
ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಜಿಲ್ಲೆ ಕಾರ್ಕಳದ ಬಳಿ ತೆಲಂಗಾಣ ಶಾಸಕ ರೋಹಿತ್ ರೆಡ್ದಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ.
ಶಾಸಕ ರೋಹಿತ್ ರೆಡ್ಡಿ, ಮಂಗಳೂರಿನಿಂದ ಶೃಂಗೇರಿಯತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರ್ಕಳದ ಮಿಯ್ಯಾರು ಬಳಿ ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡಿದೆ. ಚಾಲಕನ ನಿಯಂತ್ರಣತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.
ಅದೃಷ್ಟವಶಾತ್ ಅಪಘಾತದಲ್ಲಿ ಯಾರಿಗೂ ಯಾವುದೇ ಸಮಸ್ಯೆಯಾಗಿಲ್ಲ. ಶಾಸಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಾರ್ಕಳ ಪೊಲೀಸರು ಭೇಟಿ ನೀಡಿ ಪರಿಸೀಲನೆ ನಡೆಸಿದ್ದಾರೆ.