Kannada NewsLatestNationalPolitics

*ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ; ಸಿಎಂ ಸಿದ್ದರಾಮಯ್ಯ ಅಭಿನಂದನೆ*

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ರೇವಂತ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಯಿತು.

ತೆಲಂಗಾಣ ನೂತನ ಸಿಎಂ ಆಗಿ ಆಯ್ಕೆಯಾಗಿರುವ ರೇವಂತ್ ರೆಡ್ಡಿ ಅವರನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

ಮುಂದಿನ 5 ವರ್ಷಗಳ ಕಾಲ ತೆಲಂಗಾಣವು ಜನಪರ, ಅಭಿವೃದ್ಧಿಶೀಲ, ಪಾರದರ್ಶಕ ಆಡಳಿತಕ್ಕೆ ಸಾಕ್ಷಿಯಾಗಲಿದೆ ಎಂಬ ಪೂರ್ಣ ಭರವಸೆಯಿದೆ. ರೇವಂತ್ ರೆಡ್ಡಿಯವರ ಆಯ್ಕೆಯಿಂದ ಕರ್ನಾಟಕ – ತೆಲಂಗಾಣ ರಾಜ್ಯಗಳ ಸ್ನೇಹ ಸಂಬಂಧ ನವಯುಗಕ್ಕೆ ಕಾಲಿಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ.

Home add -Advt


Related Articles

Back to top button