
ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಶಾಲಾ ಶಿಕ್ಷಕನೊಬ್ಬ 2 ವರ್ಷಗಳಲ್ಲಿ 4ನೇ ತರಗತಿಯ 11 ವಿದ್ಯಾರ್ಥಿನಿಯರ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಘಟನೆ ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧ 27 ವರ್ಷದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಎಲ್ಲಾ ಸಂತ್ರಸ್ತೆಯರು 4ನೇ ತರಗತಿಯ ವಿದ್ಯಾರ್ಥಿನಿಯರು ಎಂದು ತಿಳಿದುಬಂದಿದೆ. ಆರೋಪಿ ಶಿಕ್ಷಕ ಟ್ಯೂಷನ್ ಕೂಡ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯೊಬ್ಬಳ ಪೋಷಕರು ಮಗಳ ಬಟ್ಟೆಯ ಮೇಲೆ ರಕ್ತದ ಕಲೆಗಳನ್ನು ಗಮನಿಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಬೇರೆ ವಿದ್ಯಾರ್ಥಿನಿಯರ ಮೇಲೂ ಕಾಮುಕ ಶಿಕ್ಷಕ ಅಟ್ಟಹಾಸಗೈದಿರುವ ಬಗ್ಗೆ ಬಾಲಕಿ ಹೇಳಿದ್ದು, ಪೋಷಕರು ಹಾಗೂ ಸ್ಥಳೀಯರು ಶಾಲೆಗೆ ಬಂದು ಆರೋಪಿ ಶಿಕ್ಷಕನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿ ಶಿಕ್ಷಕ ತಪ್ಪೊಪ್ಪಿಕೊಂಡಿದ್ದು, ಶಿಕ್ಷಕನ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ