Latest

ಅವಸರದಿಂದ ದೇವಸ್ಥಾನ ಒಡೆಯಬೇಡಿ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇವಸ್ಥಾನ ತೆರವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮುಂದಿಟ್ಟುಕೊಂಡು ಅವಸರದಿಂದ ತುರ್ತು ಕ್ರಮ‌ ಜರುಗಿಸಿ ದೇವಸ್ಥಾನಗಳನ್ನು ಒಡೆಯಬೇಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ವಿಧಾನಸೌಧ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಮೈಸೂರಿನ ದೇವಾಲಯಗಳ ತೆರವಿನ ಕುರಿತಂತೆ ಎಲ್ಲ ವಿವರಗಳನ್ನು ಸದನದಲ್ಲಿ ನೀಡುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಯಾಕೆ ಕ್ರಮ ಕೈಗೊಂಡಿದ್ದೀರಿ ಎಂದು ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರರಿಗೆ ನೋಟಿಸ್ ನೀಡಲಾಗಿದೆ ಎಂದು ಅವರು ಹೇಳಿದರು.

Home add -Advt

ಇಡೀ ಕರ್ನಾಟಕದಲ್ಲಿ ಅವಸರದ ತೀರ್ಮಾನ ತೆಗೆದುಕೊಂಡು ದೇವಸ್ಥಾನಗಳನ್ನು ಒಡೆಯುವ ಕೆಲಸ ಮಾಡಬಾರದು. ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಸಮಗ್ರವಾಗಿ ಅಧ್ಯಯನ ಮಾಡಿ, ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚಿಸಿ ಎರಡು ದಿನಗಳಲ್ಲಿ ನಿರ್ದಿಷ್ಟ ಸೂಚನೆ ನೀಡಲಾಗುವುದು. ಸದನ ನಡೆಯುತ್ತಿರುವುದರಿಂದ ಎಲ್ಲ ವಿವರಗಳನ್ನು ಸದನಕ್ಕೆ ಒದಗಿಸಲಾಗುವುದು ಎಂದು ತಿಳಿಸಿದರು.
15ಕ್ಕೂ ಹೆಚ್ಚು ಐಎಎಸ್ ಅಧಿಕಾರಿಗಳ ಹಠಾತ್ ವರ್ಗಾವಣೆ

Related Articles

Back to top button