*ದೇವಸ್ಥಾನಗಳ ಜೀರ್ಣೋದ್ಧಾರ ಅಕ್ರಮ: ತನಿಖೆಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ ಸುವರ್ಣಸೌಧ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ೫ ಗ್ರಾಮಗಳಲ್ಲಿ ದೇವಸ್ಥಾನಗಳ ಜೀರ್ಣೋದ್ಧಾರ ನೆಪದಲ್ಲಿ ಯಾವುದೇ ಕಾಮಗಾರಿಗಳನ್ನು ನಡೆಸದೇ ಬಿಲ್ ಮಾಡಲಾಗಿದೆ ಎಂಬ ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಅವರ ಮನವಿಗೆ ಸ್ಪಂದಿಸಿದ ಸಾರಿಗೆ,ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಈ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಅವರು ಹೇಳಿದರು.
ವಿಧಾನಸಭೆಯಲ್ಲಿ ಶಾಸಕಿ ಕರೆಮ್ಮ ನಾಯಕ್ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದರು. ದೇವದುರ್ಗ ತಾಲೂಕಿನಲ್ಲಿ ಈಗಾಗಲೇ ಬಿಡುಗಡೆ ಮಾಡಿದ ಅನುದಾನದಲ್ಲಿ ೮೭ ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳನ್ನು ಕೈಗೊಳ್ಳದಿರುವುದು ಸರಕಾರದ ಗಮನದಲ್ಲಿದ್ದು, ಶಾಸಕರು ಬೇರೆ ದೇವಸ್ಥಾನಗಳ ಪಟ್ಟಿ ನೀಡಿದ್ದಲ್ಲಿ ಅವುಗಳನ್ನು ಪರಿಗಣಿಸಲಾಗುವುದು ಎಂದರು.
ತುಮಕೂರು ಗ್ರಾಮಾಂತರ ಶಾಸಕರು ಸಹ ತಮ್ಮ ಕ್ಷೇತ್ರದಲ್ಲಿ ಇದೇ ರೀತಿ ೧೦ ದೇವಸ್ಥಾನಗಳ ಜೀರ್ಣೋದ್ಧಾರ ನೆಪದಲ್ಲಿ ಅಕ್ರಮ ನಡೆದಿದ್ದು,ತನಿಖೆ ನಡೆಸುವಂತೆ ಸಚಿವರನ್ನು ಕೋರಿದರು;ಇದಕ್ಕೂ ಸಮ್ಮತಿ ನೀಡಿದ ಸಚಿವ ರಾಮಲಿಂಗಾರೆಡ್ಡಿ ಅವರು ತನಿಖೆ ನಡೆಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಹೊಸದಾಗಿ ೫೦೦ ಬಸ್‌ಗಳ ಖರೀದಿ: ಹೊಸದಾಗಿ ೫೦೦ ಬಸ್‌ಗಳನ್ನು ಖರೀದಿ ಮಾಡಲಾಗುತ್ತಿದ್ದು,ಮಾರ್ಚ್ ವೇಳೆಗೆ ಬರಲಿವೆ. ೯ ಸಾವಿರ ಸಿಬ್ಬಂದಿಗಳ ನೇಮಕ ಪ್ರಕ್ರಿಯೆ ನಡೆದಿದ್ದು, ಸಿಬ್ಬಂದಿ ಮತ್ತು ಬಸ್‌ಗಳು ಬಂದ ನಂತರ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಕ್ರಮವಹಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ವೇಗವಾಗಿ ಬೆಳೆಯುತ್ತಿರುವ ಗಂಗಾವತಿ ನಗರದಲ್ಲಿ ಸ್ಯಾಟಿಲೈಟ್ ಬಸ್ ನಿಲ್ದಾಣ ನಿರ್ಮಿಸುವುದಕ್ಕೆ ಜಮೀನು ಗುರುತಿಸುವುದಕ್ಕೆ ಸಂಬAಧಿಸಿದAತೆ ಸಲ್ಲಿಕೆಯಾಗಿರುವ ಪ್ರಸ್ತಾವನೆ ಗಮನಕ್ಕಿದ್ದು, ಈ ಕುರಿತು ಸ್ಥಳೀಯ ಶಾಸಕರೊಂದಿಗೆ ಸರಕಾರದ ಜಾಗದ ಕುರಿತು ಚರ್ಚಿಸಲಾಗಿದೆ;ಸಂಬAಧಿಸಿದ ಸಚಿವರೊಂದಿಗೆ ಸಭೆ ನಡೆಸಿ ಸದರಿ ಜಾಗ ಪಡೆದು ಸ್ಯಾಟಿಲೈಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಜನಾರ್ಧನರೆಡ್ಡಿ ಅವರ ಪ್ರಶ್ನೆಯೊಂದಕ್ಕೆ ಸಚಿವ ರಾಮಲಿಂಗಾರೆಡ್ಡಿ ಅವರು ಉತ್ತರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ