
ಪ್ರಗತಿವಾಹಿನಿ ಸುದ್ದಿ : ಉತ್ತರ ಪ್ರದೇಶದ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ವಾಹನವೊಂದು ಅಪಘಾತಕ್ಕೀಡಾಗಿ 4 ಭಕ್ತರು ಸಾವನಪ್ಪಿದ್ದು, 6 ಮಂದಿಗೆ ಗಾಯಗಳಾಗಿವೆ.
ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ವಾಹನಗಳು ಡಿಕ್ಕಿ ಹೊಡೆದಿದ್ದು, ಲೋನಿ ಕತ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಫುಟಾ ಭವಾನಿಯಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕುಂಭಮೇಳಕ್ಕೆ ಭೇಟಿ ನೀಡಿ ಛತ್ತೀಸ್‌ಗಢದಿಂದ ಅಯೋಧ್ಯೆಗೆ ಹಿಂತಿರುಗುತ್ತಿದ್ದ ಬಸ್ ಕೆಟ್ಟು ರಸ್ತೆ ಬದಿಯಲ್ಲಿ ನಿಂತಿತ್ತು. ಮಹಾರಾಷ್ಟ್ರದಿಂದ ಅಯೋಧ್ಯೆಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಕಟ್ಟರ್ ಯಂತ್ರದಿಂದ ಬಸ್ ಅನ್ನು ಕತ್ತರಿಸಿ ಗಾಯಾಳುಗಳನ್ನು ಹೊರತೆಗೆಯಲಾಗಿದ್ದು, ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ