Latest

ಗೋವಾಕ್ಕೆ ಪ್ರವಾಸ ಹೊರಟಿದ್ದ ಮಹಿಳೆಯರ ಧಾರುಣ ಸಾವು

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಟೆಂಪೋ ಟ್ರಾವಲರ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಧಾರವಾಡ ಜಿಲ್ಲೆ ಇಟ್ಟಿಗಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಭೀಕರ ಅಪಘಾತ ಸಂಭವಿಸಿತ್ತು. ಸ್ಥಳದಲ್ಲೇ 10 ಜನರು ಸಾವನ್ನಪ್ಪಿದ್ದರು. ಇದೀಗ ಸಾವಿನ ಸಂಖ್ಯೆ ಏರಿಕೆಯಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ವ್ಯಕ್ತಿ ಕೂಡ ಮೃತಪಟ್ಟಿದ್ದು, ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

9 ಮಹಿಳೆಯರು ಮತ್ತು ವಾಹನದ ಚಾಲಕ ಹಾಗೂ ಕ್ಲೀನರ್ ಮೃತಪಟ್ಟವರು.

ದಾವಣಗೆರೆಯ 17 ಮಹಿಳೆಯರು ಗೋವಾಕ್ಕೆ ಪ್ರವಾಸ ಹೊರಟಿದ್ದರು. ಆದರೆ ಮಾರ್ಗಮಧ್ಯೆಯೇ ಅವರೆಲ್ಲ ಇಹಲೋಕ ತ್ಯಜಿಸಿದ್ದಾರೆ.

Home add -Advt

ಘಟನಾ ಸ್ಥಳಕ್ಕೆ ಎಸ್.ಪಿ.ಕೃಷ್ಣಕಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟೆಂಪೋ ಟ್ರಾವಲರ್ ದಾವಣಗೆರೆಯಿಂದ ಗೋವಾಕ್ಕೆ ತೆರಳುತ್ತಿತ್ತು. ಧಾರವಾಡ ಬಳಿ ಬರುತ್ತಿದ್ದಂತೆಯೇ ವೇಗವಾಗಿ ಬಂದ ಟಿಪರ್ ಟಿಟಿಗೆ ಡಿಕ್ಕಿ ಹೊಡೆದಿದೆ.

ಧಾರವಾಡ ಬಳಿ ಭೀಕರ ಅಪಘಾತ: 10 ಮಹಿಳೆಯರ ದುರ್ಮರಣ

Related Articles

Back to top button