Latest

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬೆಂಗಾವಲು ಹಾವನದ ಮೇಲೆ ದಾಳಿ

ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅಭೀಶೇಕ್ ಬ್ಯಾನರ್ಜಿ ಅವರ ಲೋಕಸಭಾ ಕ್ಷೇತ್ರ ಡೈಮಂಡ್ ಹಾರ್ಬರ್ ಗೆ ತೆರಳುತ್ತಿದ್ದ ವೇಳೆ ಕಿಡಿಗೆಡಿಗಳು ಕಲ್ಲು ಹಾಗೂ ಸಾಫ್ಟ್ ಡ್ರಿಂಕ್ಸ್ ಬಾಟಲ್ ಗಳನ್ನು ಎಸೆದಿದ್ದಾರೆ ಎಂದು ತಿಳಿದುಬಂದಿದೆ.

ದಾಳಿಯಲ್ಲಿ 15 ವಾಹನಗಳು ಜಖಂಗೊಂಡಿವೆ. ನಡ್ಡಾ ಅವರ ಕಾರು ಬುಲೆಟ್ ಪ್ರೂಫ್ ವಾಹನವಾಗಿದ್ದರಿಂದ ಅವರು ಸುರಕ್ಷಿತವಾಗಿದ್ದಾರೆ. ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿ ಹಾಗೂ ಕೋಲ್ಕತ್ತಾ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

Home add -Advt

Related Articles

Back to top button