
ಪ್ರಗತಿವಾಹಿನಿ ಸುದ್ದಿ : ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ 7 ವರ್ಷ ಜೈಲು ಶಿಕ್ಷೆ ರದ್ದು ಕೋರಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮಾ.7ಕ್ಕೆ ಮುಂದೂಡಿ ಕೋರ್ಟ್ ಆದೇಶಿಸಿದೆ.
ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿದ್ದು, ಶಿಕ್ಷೆ ಅಮಾನತು ಮಾಡಿರುವ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ. ಇನ್ನು ಇದೇ ಪ್ರಕರಣ ಸಂಬಂಧ ಇತರೆ ಪ್ರಕರಣಗಳನ್ನು ಒಟ್ಟಾಗಿ ಪಟ್ಟಿ ಮಾಡಲು ರಿಜಿಸ್ಟ್ರಿಗೆ ನ್ಯಾಯಾಲಯ ಆದೇಶ ನೀಡಿದೆ. ಸತ್ರ ನ್ಯಾಯಾಲಯದಿಂದ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ತರಿಸಲು ಸೂಚನೆ ನೀಡಿರುವ ಕೋರ್ಟ್ ವಿಚಾರಣೆಯನ್ನು ಮುಂದೂಡಿದ್ದು, ಇದರಿಂದ ಶಾಸಕ ಸೈಲ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.