Latest

*ಯಕ್ಷರಂಗದ ಭೀಷ್ಮ ಬಲಿಪ ನಾರಾಯಣ ಭಾಗವತರು ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತೆಂಕುತಿಟ್ಟು ಯಕ್ಷಗಾನ ಭೀಷ್ಮ ಎಂದೇ ಜನಪ್ರಿಯರಾಗಿದ್ದ ಭಾಗವತ ಕಲಾವಿದ ಬಲಿಪ ನಾರಾಯಣ ಭಾಗವತರು ವಿಧಿವಶರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ ನೂಯಿಯ ತಮ್ಮ ನಿವಾಸದಲ್ಲಿ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ. 60 ವರ್ಷಗಳ ಕಾಲ ಯಕ್ಷಗಾನ ಕಲಾಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಬಲಿಪ ನಾರಾಯಣ ಯಕ್ಷಗಾನ ಭಾಗವತದಲ್ಲಿ ಹೆಸರಾಗಿದ್ದರು.

13ನೇ ವಯಸ್ಸಿನಲ್ಲಿ ರಂಗಪ್ರವೇಶ ಮಾಡುವ ಮೂಲಕ ಯಕ್ಷಲೋಕಕೆ ಪದಾರ್ಪಣೆ ಮಾಡಿದ್ದ ಬಲಿಪ ನಾರಾಯಣ, ಪಡ್ರೆ ಜಠಾಧಾರಿ ಮೇಳವನ್ನು ಅರಂಭಿಸಿದ್ದರು. ಯಕ್ಷಗಾನದ 50ಕ್ಕೂ ಹೆಚ್ಚು ಪ್ರಸಂಗಗಳ ಕಂಠಪಾಠ, 30 ಪ್ರಕಟಿತ ಹಾಗೂ 15 ಅಪ್ರಕಟಿತ ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದಾರೆ.

ಬಲಿಪ ನಾರಾಯಣ ಭಾಗವತರು ದೇವಿ ಮಹಾತ್ಮೆ ಎಂಬ ಮಹಾಪ್ರಸಂಗವನ್ನು ರಚಿಸಿದ್ದು ವೇಣೂರಿನ ಕಜೆ ಸುಬ್ರಹ್ಮಣ್ಯ ಭಟ್ ಮತ್ತು ಅವರ ಸ್ನೇಹಿತರು ಇದನ್ನು ಪ್ರಕಟಿಸಿದ್ದಾರೆ.

 

*ವಿಪಕ್ಷಗಳ ಗದ್ದಲಕ್ಕೆ ತಾಳ್ಮೆ ಕಳೆದುಕೊಂಡ ಸ್ಪೀಕರ್ ಕೆಂಡಾಮಂಡಲ*

https://pragati.taskdun.com/vidhanasabhespeaker-vishweshwara-hegade-kagerieshwara-khandre/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button