Latest

ಗೋವಾದಲ್ಲಿ ಹತ್ತನೇಯ ತರಗತಿ ಪರೀಕ್ಷೆ ರದ್ಧು

ಮುಂದಿನ ಎರಡು ದಿನಗಳಲ್ಲಿ 12 ನೇಯ ತರಗತಿಯ ಪರೀಕ್ಷೆಯ ನಿರ್ಧಾರ

ಪ್ರಗತಿವಾಹಿನಿ ಸುದ್ದಿ, ಪಣಜಿ: ಕರೋನಾ ಸಾಂಕ್ರಾಮಿಕ ಪರಿಸ್ಥಿತಿಯಿಂದಾಗಿ ಗೋವಾ ಸರ್ಕಾರ ಹತ್ತನೇಯ ತರಗತಿ ಪರೀಕ್ಷೆಯನ್ನು ರದ್ಧುಗೊಳಿಸಿರುವುದಾಗಿ ಪ್ರಕಟಿಸಿದೆ.
ಮುಂದಿನ ಎರಡು ದಿನಗಳಲ್ಲಿ 12 ನೇಯ ತರಗತಿಯ ಪರೀಕ್ಷೆಯ ನಿರ್ಧಾರವನ್ನು ಪ್ರಕಟಿಸುವುದಾಗಿ ಸರ್ಕಾರ ತಿಳಿಸಿದೆ.
      ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಪ್ರಮೋದ ಸಾವಂತ್- ಕರೋನಾ ಸಾಂಕ್ರಾಮಿಕ ಪರಿಸ್ಥಿತಿಯಿಂದಾಗಿ ಹತ್ತನೇಯ ತರಗತಿ ಪರೀಕ್ಷೆಯನ್ನು ರದ್ಧುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗೋವಾ ಬೋರ್ಡ ಆಪ್ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ  ಶಾಲಾ ಶಿಕ್ಷಣ ಮಂಡಳಿ, ರಾಜ್ಯ ಶಿಕ್ಷಣ ಇಲಾಖೆ, ಶೈಕ್ಷಣಿಕ ಕ್ಷೇತ್ರದ ತಜ್ಞರು ಮತ್ತು ಇತರರು ಒಳಗೊಂಡ ಸಮೀತಿಯ ಶಿಫಾರಸ್ಸನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಸಾವಂತ್ ಮಾಹಿತಿ ನೀಡಿದರು.
       ಹತ್ತನೇಯ ತರಗತಿಯ ವಿದ್ಯಾರ್ಥಿಗಳಿಗೆ ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಪರೀಕ್ಷಾ ಫಲಿತಾಂಶಗಳನ್ನು ನಿರ್ಧರಿಸಲಾಗುತ್ತದೆ. ಮುಂದೆ ವಿಜ್ಞಾನ ಮತ್ತು ಡಿಪ್ಲೊಮಾಕ್ಕೆ ಪ್ರವೇಶ ಪಡೆಯುವವರು ಒಂದು ದಿನದ ಪರೀಕ್ಷೆಗೆ ಒಳಪಡಬೇಕಾಗುತ್ತದೆ. 12 ನೇಯ ತರಗತಿಯ ಪರೀಕ್ಷೆಯ ನಿರ್ಧಾರವನ್ನು ಮುಂದಿನ ಎರಡು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಸಿಎಂ ಸಾವಂತ್ ಮಾಹಿತಿ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button