
ಪ್ರಗತಿವಾಹಿನಿ ಸುದ್ದಿ: ಕಂದಕಕ್ಕೆ ಬಸ್ ಉರುಳಿದ ಪರಿಣಾಮ 20 ಜನರು ಸಾವನ್ನಪ್ಪಿದ್ದು, 15 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ಪಾಕಿಸ್ತಾನದ ಗಿಲ್ಲಿಟ್ – ಬಾಲ್ಟಿಸ್ತಾನ್ ಪ್ರದೇಶದ ಡೈಮರ್ ಜಿಲ್ಲೆಯ ಕಾರಕೋರಂ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತಕ್ಕೀಡಾದ ಬಸ್ ರಾವಲ್ಪಿಂಡಿಯಿಂದ ಹುಂಜಾಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಪರ್ವತದಿಂದ ಆಳ ಪ್ರಪಾತಕ್ಕೆ ಉರುಳಿದೆ.
ಬಸ್‌ನಲ್ಲಿದ್ದ ಪ್ರಯಾಣಿಕರ ಸಂಖ್ಯೆ ನಿಖರವಾಗಿ ತಿಳಿದು ಬಂದಿಲ್ಲ. ಆದರೆ, 20 ಜನರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಲಾಸ್‌ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ