Kannada NewsKarnataka NewsNational
*ಭೀಕರ ಅಪಘಾತ: ಕನಿಷ್ಠ 18 ಜನರ ಸಾವು*

ಪ್ರಗತಿವಾಹಿನಿ ಸುದ್ದಿ: ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಭಾರೀ ದುರಂತ ನಡೆದಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 18 ಮಂದಿ ಸಾವನ್ನಪ್ಪಿದ್ದಾರೆ ಮತ್ತು 19 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಬೆಹೆತಾ ಮುಝಾವರ್ ಸಮೀಪದ ಬಂಗಾರಮೌ ಪ್ರದೇಶದ ಜೋಜಿಕೋಟ್ ಗರ್ಹಾ ಗ್ರಾಮದ ಬಳಿ ಚಲಿಸುತ್ತಿದ್ದ ಹಾಲಿನ ಟ್ಯಾಂಕರ್ ವ್ಯಾನ್‌ಗೆ ಬಸ್ ಡಿಕ್ಕಿ ಹೊಡೆದಿದ್ದು ನಿದ್ದೆಯ ಮಂಪರಿನಲ್ಲಿದ್ದ ಮಂದಿ ಏನಾಯ್ತು ಎಂದು ತಿಳಿಯುವಷ್ಟರಲ್ಲಿ 18 ಜನ ಪ್ರಾಣ ಕಳೆದುಕೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿ ಅರವಿಂದ್ ಕುಮಾರ್ ತಿಳಿಸಿದ್ದಾರೆ.




